ಸೆ.8ರಂದು ಹಾಸನಕ್ಕೆ ಯದುವೀರ ಒಡೆಯರ್‌ ಭೇಟಿ

7
ಶಿಕ್ಷಕರ ದಿನಾಚರಣೆ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಸೆ.8ರಂದು ಹಾಸನಕ್ಕೆ ಯದುವೀರ ಒಡೆಯರ್‌ ಭೇಟಿ

Published:
Updated:
Deccan Herald

ಹಾಸನ : ನಗರದ ಹಾಸನಾಂಬ ಕಲಾಕ್ಷೇತ್ರದಲ್ಲಿ ಸೆ. 8ರಂದು ಶಿಕ್ಷಕರ ದಿನಾಚರಣೆ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ನಾಯಕರಹಳ್ಳಿ ಮಂಜೇಗೌಡ ತಿಳಿಸಿದರು.

35 ವರ್ಷದ ನಂತರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮೂರನೇ ತಲೆಮಾರಿನ ಮೈಸೂರು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಹಾಸನಕ್ಕೆ ಬರುತ್ತಿದ್ದಾರೆ. ಅವರನ್ನು ಬೆಳ್ಳಿ ರಥದ ಮೂಲಕ ವಿವಿಧ ಜಾನಪದ ಕಲಾ ತಂಡ ಹಾಗೂ ಮಂಗಳವಾದ್ಯಗಳ ಸಮೇತ ಹಾಸನಾಂಬ ಕಲಾಕ್ಷೇತ್ರಕ್ಕೆ ಮೆರವಣಿಗೆಯಲ್ಲಿ ಕರೆತರಲಾಗುವುದು. ಮುಖ್ಯಕಾರ್ಯನಿರ್ವಹಣಾಧಿಕಾರಿ ಜಿ.ಜಗದೀಶ್ ಮೆರವಣಿಗೆಗೆ ಚಾಲನೆ ನೀಡುವರು ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಸರ್ವೋತ್ತಮ ಶಿಕ್ಷಕ ಪ್ರಶಸ್ತಿಯನ್ನು ಸಚಿವ ಎಚ್.ಡಿ. ರೇವಣ್ಣ ಪ್ರದಾನ ಮಾಡಲಿದ್ದು, ಯದುವೀರ ಒಡೆಯರ್ ಪ್ರತಿಭಾ ಪುರಸ್ಕಾರ ನಡೆಸಿಕೊಡುವರು. ಮಹಾರಾಜರ ವಂಶಸ್ಥರಾದ ವರ್ಚಸ್ವಿ ಶ್ರೀಕಂಠ ಸಿದ್ದಲಿಂಗರಾಜೇ ಅರಸು, ಆದಿಚುಂಚನಗಿರಿ ಶಾಖಾ ಮಠದ ಶಂಭುನಾಥ ಸ್ವಾಮೀಜಿ, ಮೆಳೆಯಮ್ಮ ಅಧ್ಮಾತ್ಮ ಕೇಂದ್ರದ ಚಂದ್ರಶೇಖರ ಗುರೂಜಿ ಸಾನಿಧ್ಯ ವಹಿಸುವರು. 10 ಶಿಕ್ಷಕರಿಗೆ ಸನ್ಮಾನ ಮಾಡಲಾಗುವುದು ಎಂದು ವಿವರಿಸಿದರು.

ಶಾಸಕ ಪ್ರೀತಂ ಜೆ.ಗೌಡ, ಉಪವಿಭಾಗಾಧಿಕಾರಿ ಎಚ್.ಎಲ್. ನಾಗರಾಜು, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಭಾಗವಹಿಸುವರು. ದ್ವಿತೀಯ ಪಿಯುಸಿ ಪರೀಕ್ಷೆಯ ಕನ್ನಡ ವಿಷಯದಲ್ಲಿ 100ಕ್ಕೆ 100 ಅಂಕ ಗಳಿಸಿದ ನಗರ ಪ್ರದೇಶ ಮಕ್ಕಳು ಹಾಗೂ 100ಕ್ಕೆ 99 ಅಂಕ ಗಳಿಸಿದ ಗ್ರಾಮೀಣ ಭಾಗದ ಒಟ್ಟು 290 ವಿದ್ಯಾರ್ಥಿಗಳು ಹಾಗೂ ಐಎಎಸ್, ಕೆಎಎಸ್, ಪಿಎಚ್.ಡಿ ಪಡೆದವರಿಗೂ ಪ್ರತಿಭಾ ಪುರಸ್ಕಾರ ನೀಡಲಾಗುವುದು ಎಂದು ನುಡಿದರು.

ಸಾಹಿತಿ ಚಂದ್ರಕಾಂತ ಪಡೆಸೂರ, ಎನ್.ಎಲ್.ಚನ್ನೇಗೌಡ,   ರವಿನಾಕಲಗೂಡು, ಕಲ್ಲಹಳ್ಳಿ ಹರೀಶ್, ರಾಮಣ್ಣ ಇದ್ದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !