ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜಿ ಸಂಧಾನಕ್ಕೆ 9,753 ಪ್ರಕರಣ

12ಕ್ಕೆ ಮೆಗಾ ಲೋಕ್ ಅದಾಲತ್: ನ್ಯಾ. ಬಿ.ಕೆ.ರವಿಕಾಂತ್‌
Last Updated 10 ಮಾರ್ಚ್ 2022, 15:42 IST
ಅಕ್ಷರ ಗಾತ್ರ

ಹಾಸನ: ಜಿಲ್ಲೆಯಾದ್ಯಂತ ಎಲ್ಲಾ ತಾಲೂಕುಗಳಲ್ಲಿ ಮಾರ್ಚ್‌ 12ರಂದುರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದ್ದು, ರಾಜಿ ಸಂಧಾನ ಮೂಲಕ ಬಾಕಿ ಇರುವ ವ್ಯಾಜ್ಯಗಳನ್ನು ಇತ್ಯರ್ಥ ಮಾಡಿಕೊಳ್ಳುವಂತೆ ಹಿರಿಯ ಸಿವಿಲ್ ನ್ಯಾಯಾಧೀಶ ಬಿ.ಕೆ. ರವಿಕಾಂತ್ ಹೇಳಿದರು.

ಜಿಲ್ಲಾ ನ್ಯಾಯಾಲಯದಲ್ಲಿ ಗುರುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಎಲ್ಲಾತಾಲೂಕುಗಳ ನ್ಯಾಯಾಲಯಗಳಲ್ಲೂ ಅದಾಲತ್ ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯ ಎಲ್ಲಾ ನ್ಯಾಯಾಲಯಗಳ ವ್ಯಾಪ್ತಿಯಲ್ಲಿ ಎಲ್ಲಾ ವಿಧದ ಒಟ್ಟು 74,432 ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣಗಳು ಬಾಕಿ ಇದ್ದು, ಸುಮಾರು 27,091 ಕ್ಕೂ ಹೆಚ್ಚು ಪ್ರಕರಣಗಳು ರಾಜಿ ಪ್ರಕ್ರಿಯೆಗಾಗಿ ಲಭ್ಯ ಇವೆ ಎಂದು ಮಾಹಿತಿ ನೀಡಿದರು.

ರಾಜಿ ಸಂಧಾನಕ್ಕಾಗಿ ಎಲ್ಲಾ ರೀತಿಯ ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣಗಳನ್ನೊಳಗೊಂಡಂತೆ 9753 ಪ್ರಕರಣ ಗುರುತಿಸಲಾಗಿದೆ.ವಕೀಲರು, ಕಕ್ಷಿದಾರರು ಹಾಗೂ ಸಂಬಂಧಪಟ್ಟ ಇಲಾಖೆಗಳಸಹಕಾರದೊಂದಿಗೆ ಸುಮಾರು 3,500 ಕ್ಕೂ ಅಧಿಕ ಪ್ರಕರಣಗಳನ್ನುಇತ್ಯರ್ಥಗೊಳಿಸುವ ಗುರಿ ಹೊಂದಲಾಗಿದೆ ಎಂದು ವಿವರಿಸಿದರು.

ನ್ಯಾಯಾಲಯದಲ್ಲಿ ಬಾಕಿ ಇರುವ ಎಲ್ಲಾ ರೀತಿಯ ವಿವಿಧ ಸಿವಿಲ್ ವ್ಯಾಜ್ಯಗಳು,ಬಗೆಹರಿಸಬಹುದಾದ ಕ್ರಿಮಿನಲ್, ಚೆಕ್ ಬೌನ್ಸ್, ಬ್ಯಾಂಕ್ ವಸೂಲಾತಿ,ಮೋಟಾರು ವಾಹನ, ಕೌಟುಂಬಿಕ, ಭೂಸ್ವಾಧೀನ, ಕಂದಾಯ, ಜನನ ಮತ್ತು ಮರಣ ನೋಂದಣಿ, ಜೀವನಾಂಶ ಹಾಗೂ ಇತರೆ ಲಘು ಕ್ರಿಮಿನಲ್ಪ್ರಕರಣಗಳಿಗೆ ಸಂಬಂಧಿಸಿದಂತೆ ಮತ್ತು ವ್ಯಾಜ್ಯ ಪೂರ್ವ ಬ್ಯಾಂಕ್ ಸಾಲ ಮರುಪಾವತಿ ಪ್ರಕರಣಗಳನ್ನೂ ಇತ್ಯರ್ಥ ಪಡಿಸಿಕೊಳ್ಳಲು ಅವಕಾಶವಿದೆ ಎಂದು ಹೇಳಿದರು.

ಸಂಬಂಧಪಟ್ಟ ಕಕ್ಷಿದಾರರು ವಕೀಲರ ಮೂಲಕ ಅಥವಾ ಖುದ್ದಾಗಿ ರಾಜಿಸಂಧಾನದ ಮೂಲಕ ಪ್ರಕರಣ ಇತ್ಯರ್ಥಪಡಿಸಿಕೊಳ್ಳಬಹುದಾಗಿದ್ದು, ಸದುಪಯೋಗ ಪಡೆದುಕೊಳ್ಳುವಂತೆ ಕೋರಿದರು.

ರಾಜಿ ಪ್ರಕ್ರಿಯೆಯಿಂದ ಸಮಯ ಜೊತೆಗೆ ಹಣವನ್ನೂ ಉಳಿಸಬಹುದಾಗಿದೆ.ಎರಡೂ ಕಡೆಯ ಕಕ್ಷಿದಾರರ ನಡುವಿನ ಬಾಂಧವ್ಯವೂ ವೃದ್ಧಿಯಾಗಲಿದೆ ಎಂದುಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT