ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಸನ | ಝೀರೋ ಟ್ರಾಫಿಕ್‌ನಲ್ಲಿ ಕರೆದೊಯ್ದರೂ ಬದುಕದ ಮಗು

Published 29 ನವೆಂಬರ್ 2023, 16:44 IST
Last Updated 29 ನವೆಂಬರ್ 2023, 16:44 IST
ಅಕ್ಷರ ಗಾತ್ರ

ಹಾಸನ: ತಲೆಗೆ ಪೆಟ್ಟಾಗಿದ್ದ ಮಗುವನ್ನು ನಗರದ ಜಿಲ್ಲಾ ಆಸ್ಪತ್ರೆಯಿಂದ ಝೀರೋ ಟ್ರಾಫಿಕ್‌ನಲ್ಲಿ ಬೆಂಗಳೂರಿಗೆ ಕರೆದೊಯ್ದಿದ್ದು, ನಿಮ್ಹಾನ್ಸ್‌ ಆಸ್ಪತ್ರೆಯಲ್ಲಿ ಮಗು ಮೃತಪಟ್ಟಿತು.

ಚಿಕ್ಕಮಗಳೂರು ತಾಲ್ಲೂಕಿನ ಬಸವನಗುಡಿ ನಿವಾಸಿಗಳಾದ ವೆಂಕಟೇಶ್ –ಜ್ಯೋತಿ ದಂಪತಿಯ ಒಂದೂವರೆ ವರ್ಷದ ಮಗು ವಿಜಯ್, ಮಂಗಳವಾರ ಮನೆಯಲ್ಲಿ ಆಟವಾಡುವ ಸಂದರ್ಭದಲ್ಲಿ ಮೆಟ್ಟಿಲಿನಿಂದ ಬಿದ್ದು ತಲೆಗೆ ತೀವ್ರ ಪೆಟ್ಟಾಗಿತ್ತು. ಮಗುವನ್ನು ಚಿಕಿತ್ಸೆಗಾಗಿ ಹಾಸನ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಪಾಸಣೆ ನಡೆಸಿದ ವೈದ್ಯರು, ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲು ಸೂಚಿಸಿದ್ದರು.

ಅದರಂತೆ ಮಗುವನ್ನು ಬೆಂಗಳೂರಿಗೆ ಕರೆದೊಯ್ಯಲು ಪೊಲೀಸರು ಝಿರೋ ಟ್ರಾಫಿಕ್‌ ವ್ಯವಸ್ಥೆ ಮಾಡಿದ್ದರು. ಆದರೆ, ಬೆಂಗಳೂರಿನ ನಿಮ್ಹಾನ್ಸ್‌ ಆಸ್ಪತ್ರೆಯಲ್ಲಿ ಮಗು ಮೃತಪಟ್ಟಿದೆ. ‘ತ್ವರಿತವಾಗಿ ಚಿಕಿತ್ಸೆ ನೀಡುವಲ್ಲಿ ನಿಮ್ಹಾನ್ಸ್ ವೈದ್ಯರು ನಿರ್ಲಕ್ಷ್ಯ ವಹಿಸಿದ್ದೇ ಮಗುವಿನ ಸಾವಿಗೆ ಕಾರಣ’ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT