ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಸನ: ಕುಸಿದು ಬಿದ್ದ ನೀರಿನ ಟ್ಯಾಂಕ್

ಶಿಥಿಲಗೊಂಡಿದ್ದ 38 ವರ್ಷದ ಹಳೆಯ ಟ್ಯಾಂಕ್‌
Last Updated 26 ಜುಲೈ 2021, 2:53 IST
ಅಕ್ಷರ ಗಾತ್ರ

ಹಾಸನ: ತಾಲ್ಲೂಕಿನ ದೊಡ್ಡಗದ್ದವಳ್ಳಿಯಲ್ಲಿ ಶಿಥಿಲಗೊಂಡಿದ್ದ ನೀರಿನ ಟ್ಯಾಂಕ್‌ ಕುಸಿದು ಬಿದ್ದಿದ್ದು, ಅದೃಷ್ಟವಶಾತ್‌ ಯಾವುದೇ ಪ್ರಾಣಾಪಾಯವಾಗಿಲ್ಲ.

ಗ್ರಾಮಕ್ಕೆ ನೀರು ಸರಬರಾಜು ಮಾಡಲು 38 ವರ್ಷಗಳ ಹಿಂದೆ ಟ್ಯಾಂಕ್‌ ನಿರ್ಮಿಸಲಾಗಿತ್ತು. 30 ಸಾವಿರ ಲೀಟರ್ ನೀರಿನ ಸಾಮರ್ಥ್ಯದ ಟ್ಯಾಂಕ್ ಸಂಪೂರ್ಣ ಶಿಥಿಲಗೊಂಡಿತ್ತು. ಈ ಬಗ್ಗೆ ಗ್ರಾಮಸ್ಥರು ಅಧಿಕಾರಿಗಳ ಗಮನಕ್ಕೆ ತಂದಿದ್ದರೂ ಟ್ಯಾಂಕ್‌ ತೆರವುಗೊಳಿಸಿರಲಿಲ್ಲ.

ಭಾನುವಾರ ಬೆಳಗಿನ ಜಾವ 4 ಗಂಟೆ ಸಮಯದಲ್ಲಿ ಟ್ಯಾಂಕ್‌ ಕುಸಿದಿದೆ. ಟ್ಯಾಂಕ್ ಪಕ್ಕದಲ್ಲಿ ಮನೆಗಳು, ಹಳ್ಳಿಕಟ್ಟೆ, ಅಂಗಡಿಗಳು ಇವೆ. ಟ್ಯಾಂಕ್‌ ನೇರವಾಗಿ ಕುಸಿದಿದ್ದರಿಂದ ಅನಾಹುತ ತಪ್ಪಿದೆ. ಈವರೆಗೂ ಇದೇ ಟ್ಯಾಂಕ್‌ನಿಂದ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT