ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅರಕಲಗೂಡು: 50 ಸಾವಿರ ಶ್ರೀಗಂಧ ಗಿಡ ಬೆಳೆಸಿದ ಕೃಷಿಕ

ರಾಜ್ಯಮಟ್ಟದ ಅತ್ಯುತ್ತಮ ರೈತ ಪ್ರಶಸ್ತಿ ರಂಗಸ್ವಾಮಿ ಭಾಜನ
Last Updated 22 ಡಿಸೆಂಬರ್ 2021, 19:31 IST
ಅಕ್ಷರ ಗಾತ್ರ

ಅರಕಲಗೂಡು: ಆಡು ಮುಟ್ಟದ ಸೊಪ್ಪಿಲ್ಲ ಎಂಬಂತೆ ರಂಗಸ್ವಾಮಿ ನಡೆಸದ ಕೃಷಿ ಇಲ್ಲ. ಯಾವುದೇ ಹೊಸಕೃಷಿ ಬಗ್ಗೆ ತಿಳಿದರೂ ತಮ್ಮ ಕೃಷಿ ಕ್ಷೇತ್ರದಲ್ಲಿ ಅದನ್ನು ಅಳವಡಿಸುವ ಪ್ರಯೋಗಶೀಲರು.

ತಾಲ್ಲೂಕಿನ ದೊಡ್ಡಮಗ್ಗೆಯ ಪ್ರಗತಿಪರ ಕೃಷಿಕ ಎಂ.ಸಿ. ರಂಗಸ್ವಾಮಿ ಅವರಕೃಷಿ ಕ್ಷೇತ್ರದ ಸಾಧನೆ ಇತರರಿಗೆ ಮಾದರಿಯಾಗಿದೆ.400 ಎಕರೆ ಪ್ರದೇಶದಲ್ಲಿ ಇವರು ನಡೆಸಿರುವ ಕೃಷಿ ಎಂಥವರನ್ನೂ ಬೆರಗಾಗಿಸುತ್ತದೆ. 100ಎಕರೆ ಪ್ರದೇಶದಲ್ಲಿ ಕಾಫಿ, 100 ಎಕರೆ ಅಡಿಕೆ, ಅಡಿಕೆಯಲ್ಲಿ ಮಿಶ್ರ ಬೆಳೆಯಾಗಿ 50 ಎಕರೆಪ್ರದೇಶದಲ್ಲಿ ಅತ್ಯುತ್ತಮ ಏಲಕ್ಕಿ ಕೃಷಿ ನಡೆಸಿದ್ದಾರೆ.

ಅರಣ್ಯ ಕೃಷಿಯತ್ತ ಆಕರ್ಷಿತರಾಗಿ ತಮ್ಮ ಜಮೀನಿನಲ್ಲಿ ಸುಮಾರು 50 ಸಾವಿರ ಶ್ರೀಗಂಧದ ಗಿಡ ಬೆಳೆಸಿದ್ದಾರೆ. ಸಿಲ್ವರ್, ತೇಗ,ಹೆಬ್ಬೇವು ಸೇರಿದಂತೆ ವಿವಿಧ ಜಾತಿಯ ಮರಗಳ ಕೃಷಿ ನಡೆಸಿದ್ದಾರೆ.

5 ಸಾವಿರ ಅವಕಾಡೊ (ಬೆಣ್ಣೆಹಣ್ಣು), 3 ಸಾವಿರ ಸೀತಾಫಲ, 3 ಸಾವಿರ ಲಕ್ಷ್ಮಣ ಫಲ, 3ಸಾವಿರ ನುಗ್ಗೆ, 3 ಸಾವಿರ ಹಲಸು, 6 ಸಾವಿರ ತೆಂಗಿನ ಗಿಡಗಳ ಕೃಷಿ ನಡೆಸಿದ್ದಾರೆ. ಪಾಲಿ ಹೌಸ್‌ನಲ್ಲಿ ಕ್ಯಾಪ್ಸಿಕಂ ಬೆಳೆ ಬೆಳೆದಿದ್ದಾರೆ.

ಹೈನುಗಾರಿಕೆಯನ್ನೂ ಅಳವಡಿಸಿ ಕೊಂಡಿರುವ ಇವರು ಅತ್ಯುನ್ನತ ತಂತ್ರಜ್ಞಾನದ ಡೇರಿ ತೆರೆದಿದ್ದು, 800 ಎಚ್ ಎಫ್ ತಳಿಯ ಹಸುಗಳು ನಿತ್ಯ 6 ಸಾವಿರ ಲೀಟರ್‌ ಹಾಲು ನೀಡುತ್ತವೆ. ನೀರಾವರಿಗಾಗಿ ನಿರ್ಮಿಸಿ ಕೊಂಡಿರುವ 4 ಕೆರೆಗಳಲ್ಲಿ 3 ಲಕ್ಷ ಮೀನಿನ ಮರಿಗಳಸಾಕಣೆ ನಡೆಸುವ ಮೂಲಕ ಮತ್ಸೋದ್ಯಮ ಮತ್ತು ನಾಟಿ ತಳಿ ಕೋಳಿಗಳು, ಜೇನು
ಸಾಕಣೆಯನ್ನೂ ನಡೆಸಿದ್ದಾರೆ.

ರಾಜ್ಯದ ವಿವಿಧ ಭಾಗಗಳಿಂದ ರೈತರು, ಕೃಷಿ ವಿದ್ಯಾರ್ಥಿಗಳು ಇವರ ಜಮೀನಿಗೆ ಭೇಟಿ ನೀಡುತ್ತಾರೆ. ಇವರ ಸಾಧನೆ ಗುರುತಿಸಿ ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ಕೃಷಿ ಮೇಳದಲ್ಲಿ 2021 ನೇಸಾಲಿನ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ರಾಜ್ಯಮಟ್ಟದ ಅತ್ಯುತ್ತಮ ರೈತ ಪ್ರಶಸ್ತಿನೀಡಲಾಗಿದೆ. ರಂಗಸ್ವಾಮಿ ತಂದೆ ಎಂ.ಜೆ. ತಿಮ್ಮೇಗೌಡ, ತಾಯಿ ಲಕ್ಷ್ಮಮ್ಮ ಮತ್ತು ಸಹೋದರರುಸೇರಿದಂತೆ ಇಡೀ ಕುಟುಂಬವೇ ಕೃಷಿಯಲ್ಲಿ ತೊಡಗಿಸಿಕೊಂಡಿದೆ.

ಜಿಲ್ಲಾ ಮತ್ತು ರಾಜ್ಯಮಟ್ಟದ ಹಲವು ಪ್ರಶಸ್ತಿ ಪುರಸ್ಕಾರಗಳು ಇವರನ್ನು ಅರಸಿ ಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT