ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಸನ: ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿ ಶವ ಪತ್ತೆ

Published 22 ಫೆಬ್ರುವರಿ 2024, 14:22 IST
Last Updated 22 ಫೆಬ್ರುವರಿ 2024, 14:22 IST
ಅಕ್ಷರ ಗಾತ್ರ

ಹಾಸನ: ನಗರದ ಮಾಸ್ಟರ್ಸ್ ಕಾಲೇಜಿನ ಹಾಸ್ಟೆಲ್ ಕೋಣೆಯಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿ ವಿಕಾಸ್‌ (18) ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ‘ಆತನನ್ನು ಕೊಲೆ ಮಾಡಿ ನೇಣು ಬಿಗಿದಿದ್ದಾರೆ’ ಎಂದು ಸಂಬಂಧಿಕರು ಆರೋಪಿಸಿದ್ದಾರೆ.

ಚನ್ನರಾಯಪಟ್ಟಣ ತಾಲ್ಲೂಕಿನ ಬೆಳಗುಲಿ ಗ್ರಾಮದ ಸುರೇಶ್–ಮಮತಾ ದಂಪತಿಯ ಏಕೈಕ ಪುತ್ರ ವಿಕಾಸ್‌, ದ್ವಿತೀಯ ಪಿಯುಸಿ ಓದುತ್ತಿದ್ದ. ಗುರುವಾರ ಬೆಳಿಗ್ಗೆ 8.30ಕ್ಕೆ ತರಗತಿಗೆ ತೆರಳಿದ್ದ ಆತ, 10 ಗಂಟೆ ವೇಳೆಗೆ ಕಾಲೇಜು ಪಕ್ಕದ ಕನ್ವೆನ್ಷನ್ ಹಾಲ್‌ನಲ್ಲಿರುವ ಹಾಸ್ಟೆಲ್ ಕೊಠಡಿಗೆ ಮರಳಿದ್ದ. ನಂತರ ಈ ಘಟನೆ ನಡೆದಿದ್ದು, ‘ಆತನ ಸಾವಿಗೆ ವಾರ್ಡನ್ ಕಾರಣ’ ಎಂದು ಸಂಬಂಧಿಕರು ಆರೋಪಿಸಿದ್ದಾರೆ

‘ಕಿಟಕಿಗೆ ಹಗ್ಗ ಬಿಗಿದಿದ್ದು, ವಿಕಾಸ್‌ನ ಕಾಲು ಕೂಡ ನೆಲಕ್ಕೆ ತಾಕಿದ ಸ್ಥಿತಿಯಲ್ಲಿ ಇದೆ. ಕೊಲೆ ಮಾಡಿ ಆತನನ್ನು ನೇಣು ಹಾಕಿದ್ದಾರೆ’ ಎಂದು ಸಂಬಂಧಿಕ ವಿಶ್ವನಾಥ್ ಆರೋಪಿಸಿದ್ದಾರೆ.

‘ಶಿಕ್ಷಣ ಸಚಿವರು ಪ್ರಕರಣದ ಕೂಲಂಕಷ ತನಿಖೆ ನಡೆಸಿ, ನ್ಯಾಯ ಒದಗಿಸಬೇಕು. ಕಾಲೇಜಿನ ಪರವಾನಗಿ ರದ್ದು ಮಾಡಬೇಕು. ಇಲ್ಲವಾದರೆ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸುತ್ತೇವೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT