ಆಲೂರು: ಆಲೂರು-ಮಗ್ಗೆ ರಸ್ತೆ ಹೊನ್ನೇನಹಳ್ಳಿ ಕ್ರಾಸ್ ಬಳಿ ಸೋಮವಾರ ಸಂಜೆ ಚಲಿಸುತ್ತಿದ್ದ ಆಟೊರಿಕ್ಷಾ ಪಲ್ಟಿಯಾಗಿ ತಾಯಿ ಹಾಗೂ ಮಗ ಸ್ಥಳದಲ್ಲೇ ಮೃತಪಟ್ಟರು.

ಕುದುರುವಳ್ಳಿ ಗ್ರಾಮದ ಪ್ರಿಯಾಂಕ (28) ಮತ್ತು ಅವರ ಪುತ್ರ ವಿನೀತ್ (7) ಮೃತರು. ಚಾಲಕನ ನಿಯಂತ್ರಣ ತಪ್ಪಿ ಆಟೊ ಪಲ್ಟಿಯಾದ ಪರಿಣಾಮ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.

ಅಪಘಾತದಲ್ಲಿ ಆಟೊರಿಕ್ಷಾ ಚಾಲಕ ಅಬ್ಬಾಸ್ (52) ಹಾಗೂ ಬಾಲಕ ಸಾಗರ್ (13) ಗಾಯಗೊಂಡಿದ್ದು, ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಪಟ್ಟಣ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-36-1828332909

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.