ಸೋಮವಾರ, ಜನವರಿ 27, 2020
14 °C

ಉಪನೋಂದಣಾಧಿಕಾರಿ ಕಚೇರಿ ಮೇಲೆ ಎಸಿಬಿ ದಾಳಿ: ಹೆಚ್ಚುವರಿಯಾಗಿದ್ದ ₹84 ಸಾವಿರ ವಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚನ್ನರಾಯಪಟ್ಟಣ: ಉಪ ನೋಂದಣಾಧಿಕಾರಿ ಕಚೇರಿ ಮೇಲೆ ಶನಿವಾರ ಸಂಜೆ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ದಾಳಿ ಮಾಡಿ, ಹೆಚ್ಚುವರಿಯಾಗಿದ್ದ ₹84 ಸಾವಿರ ನಗದನ್ನು ವಶಕ್ಕೆ ಪಡೆದಿದ್ದಾರೆ.

ನೋಂದಣಿಗೆ ನಿಗದಿಪಡಿಸಿದ ಶುಲ್ಕಕ್ಕಿಂತ ಹೆಚ್ಚುವರಿಯಾಗಿ ₹84 ಸಾವಿರ ಇದ್ದಿದ್ದು ಕಂಡುಬಂತು. ಈ ಹಣವನ್ನು ನ್ಯಾಯಾಲಯಕ್ಕೆ ಒಪ್ಪಿಸಲಾಗುವುದು ಎಸಿಬಿ ಅಧಿಕಾರಿಗಳು ತಿಳಿಸಿದರು.

ಉಪ ನೋಂದಣಾಧಿಕಾರಿ ನಾಗರಾಜು, ಒಬ್ಬ ಸಿಬ್ಬಂದಿ, ಇಬ್ಬರು ಮಧ್ಯವರ್ತಿಗಳಿಗೆ ತನಿಖೆಗೆ ಹಾಜರಾಗು ವಂತೆ ನೋಟಿಸ್ ನೀಡಲಾಗಿದೆ. ಉಪ ನೋಂದಣಾಧಿಕಾರಿಯ ಕಚೇರಿಯಲ್ಲಿ ಮಧ್ಯವರ್ತಿ ಗಳ ಹಾವಳಿ ಹೆಚ್ಚಾಗಿದೆ ಎಂದು ಸಾರ್ವಜನಿಕರಿಂದ ದೂರು ಬಂದಿದ್ದರಿಂದ ದಾಳಿ ನಡೆಸಲಾಗಿದೆ.

ಭ್ರಷ್ಟಾಚಾರ ನಿಗ್ರಹ ದಳದ ಡಿವೈಎಸ್ಪಿ ಪೂರ್ಣಚಂದ್ರ ತೇಜಸ್ವಿ ನೇತೃತ್ವದಲ್ಲಿ ಸಿಪಿಐಗಳಾದ ಕೆ. ಜಗದೀಶ್, ಭರತ್ ಗೌಡ ದಾಳಿ ನಡೆಸಿದ್ದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು