ಬುಧವಾರ, ಆಗಸ್ಟ್ 17, 2022
25 °C

ಆಲೂರು: ಎಸಿಬಿ ಬಲೆಗೆ ಆರ್‌ಐ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಆಲೂರು: ಕಸಬಾ ಹೋಬಳಿಯ ಕಂದಾಯ ನಿರೀಕ್ಷಕ ಹರೀಶ್ ಅವರು ಭ್ರಷ್ಟಾಚಾರ ನಿಗ್ರಹ (ಎಸಿಬಿ) ದಳದ  ಬಲೆಗೆ ಬಿದ್ದಿದ್ದಾರೆ.

ವೃದ್ಧಾಪ್ಯ ವೇತನಕ್ಕೆ ಅರ್ಜಿ ಸಲ್ಲಿಸಿದ್ದ ಕಾಟಿಹಳ್ಳಿಯ ರಂಗನಾಥ್ ಅವರಿಗೆ ₹ 3000 ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಅರ್ಜಿದಾರರು ಹರೀಶ್ ಅವರಿಗೆ ಹಣ ನೀಡುವ ಸಂದರ್ಭದಲ್ಲಿ ನಿಗ್ರಹ ದಳದ ಮುಖ್ಯಸ್ಥ ಕೃಷ್ಣಮೂರ್ತಿ ಅವರ ತಂಡ ದಾಳಿ ಮಾಡಿ ಲಂಚದ ಹಣ ಸಮೇತ ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಹರೀಶ್ ಹಲವು ವರ್ಷಗಳಿಂದ ಕಸಬಾ ಹೋಬಳಿಯಲ್ಲಿ ವೃತ್ತ ನಿರೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು