ಹಿರೀಸಾವೆ: ಟ್ರ್ಯಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟಿರುವ ಘಟನೆ ಬುಧವಾರ ರಾತ್ರಿ ಹಿರೀಸಾವೆಯಲ್ಲಿ ನಡೆದಿದೆ.
ಚನ್ನರಾಯಪಟ್ಟಣ ತಾಲ್ಲೂಕು ಶ್ರವಣಬೆಳಗೊಳ ಹೋಬಳಿಯ ಸುಂಡಹಳ್ಳಿ ಗ್ರಾಮದ ರವಿ (30) ಮೃತ ವ್ಯಕ್ತಿ. ಅವರು ಹಿರೀಸಾವೆಯಿಂದ ಬೈಕ್‌ನಲ್ಲಿ ಶ್ರವಣಬೆಳಗೊಳ ಕಡೆಗೆ ಹೋಗುತ್ತಿದ್ದಾಗ, ರೈಲ್ವೆ ಮೇಲ್ಸೇತುವೆ ಸೇತುವೆ ಬಳಿ ಎದುರಿನಿಂದ ಬಂದ ಟ್ರ್ಯಾಕ್ಟರ್ ಡಿಕ್ಕಿ ಹೊಡೆದಿದೆ. ತಲೆ, ಕೈಕಾಲುಗಳಿಗೆ ತೀವ್ರ ಪೆಟ್ಟಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹಿರೀಸಾವೆ ಠಾಣೆಯಲ್ಲಿ ಗುರುವಾರ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.