ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಕ್ರಿಯ ಪ್ರಕರಣ ಹೆಚ್ಚಳ

Last Updated 25 ಮಾರ್ಚ್ 2021, 13:36 IST
ಅಕ್ಷರ ಗಾತ್ರ

ಹಾಸನ: ಜಿಲ್ಲೆಗೆ ಕೋವಿಡ್ ಎರಡನೇ ಅಲೆ ಕಾಲಿಟ್ಟಿದ್ದು, ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ.ಗುರುವಾರ 44 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳು ದ್ವಿಶತಕದ ಗಡಿ ದಾಟಿದೆ.

ಒಟ್ಟು ಸೋಂಕಿತರ ಸಂಖ್ಯೆ 29170ಕ್ಕೆ ಏರಿಕೆಯಾಗಿದ್ದು, 28404 ಜನರ ಆರೋಗ್ಯದಲ್ಲಿ ಚೇತರಿಕೆಯಾಗಿದೆ. 297 ಸಕ್ರಿಯ ಪ್ರಕರಣಗಳ ಪೈಕಿ 8 ಜನ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.‌

ಎರಡು ತಿಂಗಳ ಬಳಿಕ ದಾಖಲೆ ಪ್ರಮಾಣದಲ್ಲಿ ಏರಿಕೆಯಾಗಿದೆ. ಕೊರೊನಾ ನಿಯಂತ್ರಣಕ್ಕಾಗಿ ಆರೋಗ್ಯ ಇಲಾಖೆ ಅಧಿಕಾರಿ ಮತ್ತು ಸಿಬ್ಬಂದಿ ಮತ್ತೊಮ್ಮೆ ಸನ್ನದ್ಧರಾಗಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಹೊಸದಾಗಿ ಆಲೂರು 6, ಅರಕಲಗೂಡು 4, ಅರಸೀಕೆರೆ 5, ಬೇಲೂರು 1, ಚನ್ನರಾಯಪಟ್ಟಣ 3, ಹಾಸನ 18, ಹೊಳೆನರಸೀಪುರ 3, ಸಕಲೇಶಪುರ 2 ಹಾಗೂ ಇತರೆ ಜಿಲ್ಲೆಯ ಇಬ್ಬರಿಗೆ ಸೋಂಕು ಕಾಣಿಸಿಕೊಂಡಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಂ.ಸತೀಶ್‌ ಕುಮಾರ್‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT