ಶುಕ್ರವಾರ, ಜೂನ್ 18, 2021
24 °C

ಹಾಸನದಲ್ಲಿ 16 ಸಾವಿರ ದಾಟಿದ ಸಕ್ರಿಯ ಪ್ರಕರಣಗಳು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಾಸನ: ಜಿಲ್ಲೆಯಲ್ಲಿ ಕೋವಿಡ್‌ ಪೀಡಿತರ ಸಂಖ್ಯೆ ಮತ್ತಷ್ಟು ಏರಿಕೆಯಾಗಿದೆ. ಶನಿವಾರ ಒಂದೇ ದಿನ 2193 ಪ್ರಕರಣಗಳು ವರದಿಯಾಗಿದ್ದು, 13 ಮಂದಿ ಮೃತಪಟ್ಟಿದ್ದಾರೆ.

ಇದರೊಂದಿಗೆ ಒಟ್ಟಾರೆ ಸೋಂಕಿತರ ಸಂಖ್ಯೆ 62,999 ದಾಟಿದೆ. ಸಾವಿನ ಸಂಖ್ಯೆ 781ಕ್ಕೇರಿದೆ. 1673 ಸೋಂಕಿತರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇದುವರೆಗೆ ಚೇತರಿಕೆ ಕಂಡವರ ಸಂಖ್ಯೆ 46,090 ತಲುಪಿದೆ. 16,128 ಸಕ್ರಿಯ ಪ್ರಕರಣಗಳ ಪೈಕಿ 133 ಮಂದಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಹೊಸದಾಗಿ ಆಲೂರು ತಾಲ್ಲೂಕಿನ 97, ಅರಕಲಗೂಡು 261, ಅರಸೀಕೆರೆ 251, ಬೇಲೂರು 217, ಚನ್ನರಾಯಪಟ್ಟಣ 331, ಹಾಸನ 686, ಹೊಳೆನರಸೀಪುರ 174, ಸಕಲೇಶಪುರ 176 ಮಂದಿಗೆ ಕೊರೊನಾ ಸೋಂಕು ತಗುಲಿದೆ. ಹಾಸನ ತಾಲ್ಲೂಕಿನ ಆರು, ಅರಸೀಕೆರೆಯ 3, ಅರಕಲಗೂಡು, ಬೇಲೂರು, ಚನ್ನರಾಯಪಟ್ಟಣ, ಹೊಳೆನರಸೀಪುರ ತಲಾ ಒಬ್ಬರು ಮೃತಪಟ್ಟಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಂ.ಸತೀಶ್‌ ಕುಮಾರ್‌ ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು