ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

8 ಸಾವಿರ ದಾಟಿದ ಸಕ್ರಿಯ ಪ್ರಕರಣ

Last Updated 3 ಮೇ 2021, 13:00 IST
ಅಕ್ಷರ ಗಾತ್ರ

ಹಾಸನ: ಕೋವಿಡ್‌ ಎರಡನೇ ಅಲೆ ಊಹೆಗೂ ನಿಲುಕದಂತೆ ವ್ಯಾಪ್ತಿ ವಿಸ್ತರಿಸಿಕೊಳ್ಳುತ್ತಿದ್ದು, ಚಿಕಿತ್ಸೆಗೆ ಸ್ಪಂದಿಸದೆ ಮೃತಪಡುತ್ತಿರುವವರ ಸಂಖ್ಯೆ ಹೆಚ್ಚುತ್ತಲೇ ಇದೆ.

ಸೋಮವಾರ ಗಠಿಷ್ಠ 1277 ಪ್ರಕರಣ ಪತ್ತೆಯಾಗಿದ್ದು, ಚಿಕಿತ್ಸೆಗೆ ಸ್ಪಂದಿಸದೆ 15 ಜನರು ಅಸುನೀಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 42313ಕ್ಕೆ ಏರಿಕೆಯಾಗಿದೆ. ಕಾಯಿಲೆಯಿಂದ ಈವರೆಗೆ ಮೃತಪಟ್ಟವರ ಸಂಖ್ಯೆ 616.

236 ಜನ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಒಟ್ಟು 33598 ಜನರ ಆರೋಗ್ಯದಲ್ಲಿ ಚೇತರಿಕೆಯಾಗಿದೆ. 8099 ಸಕ್ರಿಯ ಪ್ರಕರಣಗಳ ಪೈಕಿ 89 ಜನರು ತೀವ್ರ ನಿಗಾದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಹೊಸದಾಗಿ ಆಲೂರು ತಾಲ್ಲೂಕು 31, ಅರಕಲಗೂಡು 183, ಅರಸೀಕೆರೆ 163, ಬೇಲೂರು 152, ಚನ್ನರಾಯಪಟ್ಟಣ 203, ಹಾಸನ 450, ಹೊಳೆನರಸೀಪುರ 25, ಸಕಲೇಶಪುರ 61, ಇತರೆ ಜಿಲ್ಲೆಯ 9 ಮಂದಿಗೆ ಕೊರೊನಾ ಸೋಂಕು ತಗುಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಂ.ಸತೀಶ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT