ಶುಕ್ರವಾರ, 20 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಆಲೂರು | ಬಿಜೆಪಿಗೆ ಹೆಚ್ಚು ಸದಸ್ಯರನ್ನು ಸೇರ್ಪಡೆಗೊಳಿಸಿ: ಶಾಸಕ

Published : 2 ಸೆಪ್ಟೆಂಬರ್ 2024, 15:26 IST
Last Updated : 2 ಸೆಪ್ಟೆಂಬರ್ 2024, 15:26 IST
ಫಾಲೋ ಮಾಡಿ
Comments

ಆಲೂರು: ‘ಕಾರ್ಯಕರ್ತರು ಬೂತ್ ಮಟ್ಟದಲ್ಲಿ ಸಾಧ್ಯವಾದಷ್ಟು ಹೆಚ್ಚು ಸದಸ್ಯರನ್ನು ಸೇರ್ಪಡೆ ಮಾಡಬೇಕು’ ಎಂದು ಶಾಸಕ ಸಿಮೆಂಟ್ ಮಂಜು ಕಾರ್ಯಕರ್ತರಿಗೆ ಸಲಹೆ ನೀಡಿದರು.

ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ‘ಈ ಹಿಂದಿನ ಬಿಜೆಪಿ ಸರ್ಕಾರದಲ್ಲಿ ಕ್ಷೇತ್ರದಲ್ಲಿ ಆಗಿರುವ ಅಭಿವೃದ್ಧಿ ಕೆಲಸಗಳು, ನಾನು ಶಾಸಕನಾದ ನಂತರ ಆಗಿರುವ ಕೆಲಸಗಳು ಮತ್ತು ಸಾಮಾಜಿಕ ತಿಳಿವಳಿಕೆಯನ್ನು ಜನರಿಗೆ ತಿಳಿಸಬೇಕು. ಬಿಜೆಪಿ ದೇಶದಲ್ಲೇ ಅತಿ ದೊಡ್ಡ ರಾಜಕೀಯ ಪಕ್ಷವಾಗಿ ಹೊರಹೊಮ್ಮಿದ್ದು, ಸುಮಾರು 18 ಕೋಟಿ ಸದಸ್ಯರನ್ನು ಹೊಂದಿದೆ. ಈಗ ನಡೆಲಿರುವ ಅಭಿಯಾನದ ಮುಖಾಂತರ 30 ಕೋಟಿ ಸದಸ್ಯರನ್ನು ಸೇರ್ಪಡೆ ಮಾಡುವ ಗುರಿ ಹೊಂದಲಾಗಿದೆ. ಪಕ್ಷಕ್ಕೆ ಕಾರ್ಯಕರ್ತರು ಬೆನ್ನೆಲುಬಾಗಿದ್ದಾರೆ. ಕಾರ್ಯಕರ್ತರು ಎಲ್ಲ ಗೊಂದಲಗಳನ್ನು ಬದಿಗಿಟ್ಟು ಪಕ್ಷದ ಏಳಿಗೆಗೆ ಸಹಕರಿಸಬೇಕು’ ಎಂದರು.

ಮಂಡಲ ಅಧ್ಯಕ್ಷೆ ಉಮಾ ರವಿಪ್ರಕಾಶ್ ರವರು ಮಾತನಾಡಿ, ‘ಪಕ್ಷದ ಕೆಲವು ಮುಖಂಡರು ಕಾಂಗ್ರೆಸ್ ಪಕ್ಷದ ಜೊತೆ ಗುರುತಿಸಿಕೊಂಡು ಪಕ್ಷಕ್ಕೆ ಮುಜುಗರ ಉಂಟು ಮಾಡಿದ್ದಾರೆ. ಈ ಬಗ್ಗೆ ಶಾಸಕರು ಗಮನ ಹರಿಸಬೇಕು’ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಮಿತ್‍ಶೆಟ್ಟಿ, ಕಾರ್ಯದರ್ಶಿ ಪೂವಯ್ಯ, ಜಿಲ್ಲಾ ಸಂಚಾಲಕ ರಾಜಕುಮಾರ್, ಮಾಜಿ ಅಧ್ಯಕ್ಷ ಕಾಂತರಾಜು, ಎ. ಎಚ್. ರಮೇಶ್, ತಾಲ್ಲೂಕು ಮಹಿಳಾ ಮೋರ್ಚಾ ಅಧ್ಯಕ್ಷೆ ಸವಿತಾ, ಬಸವರಾಜ್, ಕೃಷ್ಣಮೂರ್ತಿ ಲೊಕೇಶ್, ಅಜಿತ್, ನಂಜುಂಡಪ್ಪ, ಲೋಹಿತ್, ರುದ್ರೇಗೌಡ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT