ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ದೇಶದ ಬಹುತ್ವ ರಕ್ಷಣೆಗೆ ಕಾಂಗ್ರೆಸ್ ಬದ್ಧ’

Last Updated 14 ಮಾರ್ಚ್ 2018, 6:16 IST
ಅಕ್ಷರ ಗಾತ್ರ

ಚಿಕ್ಕೋಡಿ: ‘ದೇಶದ ಬಹುತ್ವ ರಕ್ಷಣೆ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆ ಉಳಿವಿಗೆ ಕಾಂಗ್ರೆಸ್ ಬದ್ಧವಾಗಿದೆ’ ಎಂದು ಲೋಕೋಪಯೋಗಿ ಸಚಿವ ಡಾ.ಎಚ್‌.ಸಿ.ಮಹಾದೇವಪ್ಪ ಹೇಳಿದರು.

ಚಿಕ್ಕೋಡಿ–ಸದಲಗಾ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಪಟ್ಟಣದಲ್ಲಿ  ನಿರ್ಮಿಸಿರುವ 100 ಹಾಸಿಗೆಗಳ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಹಾಗೂ ಸಿಬ್ಬಂದಿ ವಸತಿ ಗೃಹಗಳ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ, ಯಕ್ಸಂಬಾದಲ್ಲಿ ಯಾತ್ರಿ ನಿವಾಸ, ಕಲ್ಲೋಳ–ಯಡೂರ ಗ್ರಾಮಗಳ ಮಧ್ಯೆ ಸೇತುವೆ ನಿರ್ಮಾಣ ಸೇರಿದಂತೆ ವಿವಿಧ ಕಾಮಗಾರಿಗೆ ಮಂಗಳವಾರ ಚಾಲನೆ ನೀಡಿ ಮಾತನಾಡಿದರು.

‘ಪ್ರಜಾಪ್ರಭುತ್ವ ವ್ಯವಸ್ಥೆ ಕುಸಿದರೆ ಜನರು ಸಹ ಪ್ರಾಣಿಗಳಂತೆ ಬದುಕಬೇಕಾದ ಸ್ಥಿತಿ ನಿರ್ಮಾಣವಾಗಲಿದೆ. ದೇಶಕ್ಕೆ ಹಿಂದೂ ರಾಷ್ಟ್ರದ ಪರಿಕಲ್ಪನೆ ಅಗತ್ಯವಿಲ್ಲ’ ಎಂದರು.

‘ಚುನಾವಣೆಯಲ್ಲಿ ನೀಡಿದ 165 ಭರವಸೆಗಳ ಪೈಕಿ 159 ಭರವಸೆಗಳನ್ನು ಈಡೇರಿಸಿರುವ ರಾಜ್ಯ ಸರ್ಕಾರ ಸರ್ವರಿಗೂ ಸಮಾನ ಸೌಲಭ್ಯ ಕಲ್ಪಿಸಿದೆ’ ಎಂದು ಹೇಳಿದರು.

ಸಂಸದ ಪ್ರಕಾಶ ಹುಕ್ಕೇರಿ ಮಾತನಾಡಿದರು, ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಮಹಾವೀರ ಮೋಹಿತೆ, ಶಾಸಕ ಗಣೇಶ ಹುಕ್ಕೇರಿ  ಮಾತನಾಡಿದರು. ಕರ್ನಾಟಕ ದ್ರಾಕ್ಷಾರಸ ಮಂಡಳಿ ಅಧ್ಯಕ್ಷ ರವೀಂದ್ರ ಮಿರ್ಜೆ, ಊರ್ಮಿಳಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT