ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾನೂನು ನೆರವಿಗೆ ಅಭಿರಕ್ಷಕ ಯೋಜನೆ

ಉದ್ಘಾಟಿಸಿದ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶೆ ವಿಜಯಲಕ್ಷ್ಮಿ ದೇವಿ
Last Updated 18 ಜನವರಿ 2023, 16:53 IST
ಅಕ್ಷರ ಗಾತ್ರ

ಹಾಸನ: ಉಚಿತವಾಗಿ ಕಾನೂನು ನೆರವು ನೀಡಲು ಪೂರ್ಣಾವಧಿಗೆ ಕಾನೂನು ನೆರವು ಅಭಿರಕ್ಷಕ ಯೋಜನೆಯನ್ನು ಜಾರಿಗೆ ತರಲಾಗಿದ್ದು, ಕ್ರಿಮಿನಲ್ ಪ್ರಕರಣಗಳಲ್ಲಿನ ಪ್ರತಿವಾದಿಗಳು ಇದರ ಅನುಕೂಲ ಪಡೆಯಬಹುದು ಎಂದು ಜಿಲ್ಲಾ ಮತ್ತು ಸೆಷನ್‌ ನ್ಯಾಯಾಧೀಶರಾದ ಎಲ್.ವಿಜಯಲಕ್ಷ್ಮಿ ದೇವಿ ತಿಳಿಸಿದರು.

ಜಿಲ್ಲಾ ನ್ಯಾಯಾಲಯ ಆವರಣದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ನೂತನವಾಗಿ ಆರಂಭಗೊಂಡ ಕಾನೂನು ನೆರವು ಅಭಿರಕ್ಷಕ ಕಚೇರಿಯನ್ನು ಬುಧವಾರ ಉದ್ಘಾಟಿಸಿ ಅವರು ಮಾತನಾಡಿದರು.

ಈ ಯೋಜನೆಯನ್ನು ಕಾನೂನು ಸೇವೆಗಳ ಪ್ರಾಧಿಕಾರ ಅಧಿನಿಯಮದಂತೆ ಜಾರಿಗೊಳಿಸಲಾಗಿದ್ದು, ಪ್ರತಿಯೊಬ್ಬ ನಾಗರಿಕರಿಗೂ ಸಂವಿಧಾನಾತ್ಮಕವಾಗಿ ಕಾನೂನು ಸಲಹೆ ಮತ್ತು ನೆರವನ್ನು ಯಾವುದೇ ತಾರತಮ್ಯವಿಲ್ಲದೇ ಪಡೆಯಬಹುದು ಎಂದರು.

ಈ ವ್ಯವಸ್ಥೆಯನ್ನು ಜಿಲ್ಲಾ ಕೇಂದ್ರ ಸ್ಥಾನದಲ್ಲಿ ಮಾತ್ರವೇ ಜಾರಿಗೊಳಿಸಲಾಗಿದ್ದು, ಕಾನೂನು ನೆರವು ಅಭಿರಕ್ಷಕರು ಕ್ರಿಮಿನಲ್ ಮತ್ತು ಸೆಷನ್ಸ್ ಪ್ರಕರಣಗಳನ್ನು ಪೂರ್ಣಾವಧಿಗೆ ನಡೆಸುವುದಲ್ಲದೇ ಕಾನೂನು ಸೇವೆಗಳ ಪ್ರಾಧಿಕಾರದ ಕಾನೂನು ಅರಿವು ಕಾರ್ಯಕ್ರಮಗಳು ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬೇಕು. ಕಾರಾಗೃಹ, ಪೊಲೀಸ್ ಠಾಣೆಗಳನ್ನು ಭೇಟಿ ಮಾಡಬೇಕು. ಈ ಬಗ್ಗೆ ಜನರಿಗೆ ಹೆಚ್ಚಿನ ಮಾಹಿತಿಯನ್ನು ನೀಡಬೇಕು ಎಂದು ತಿಳಿಸಿದರು.

ಫೆ.11ಕ್ಕೆ ಲೋಕ್‌ ಅದಾಲತ್‌: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಫೆಬ್ರುವರಿ 11 ರಂದು ರಾಷ್ಟ್ರೀಯ ಲೋಕ್ ಅದಾಲತ್ ನಡೆಸಲಾಗುತ್ತಿದ್ದು, ಏಕಕಾಲಕ್ಕೆ ರಾಜ್ಯ ಹಾಗೂ ಜಿಲ್ಲೆಯಾದ್ಯಂತ ಎಲ್ಲ ನ್ಯಾಯಾಲಯಗಳಲ್ಲೂ ನಡೆಸಲಾಗುತ್ತಿದೆ ಎಂದು ಎಲ್.ವಿಜಯಲಕ್ಷ್ಮೀ ದೇವಿ ತಿಳಿಸಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ಹಿರಿಯ ಸಿವಿಲ್‌ ನ್ಯಾಯಾಧೀಶ ಬಿ.ಕೆ. ರವಿಕಾಂತ, ವಕೀಲರ ಸಂಘದ ಅಧ್ಯಕ್ಷ ಎಂ.ಜಿ.ಪೂರ್ಣಚಂದ್ರ ತೇಜಸ್ವಿ, ಪ್ರಧಾನ ಕಾನೂನು ಅಭಿರಕ್ಷಕ ಎಸ್.ಪಿ. ಆನಂದ, ಉಪ ಪ್ರಧಾನ ಕಾನೂನು ನೆರವು ಅಭಿರಕ್ಷಕಿ ಕೆ.ಎಸ್. ನಾಗಮ್ಮ, ಸಹಾಯಕ ಕಾನೂನು ನೆರವು ಅಭಿರಕ್ಷಕಿ ಕೆ.ಕೆ.ಶೈಲಜಾ ಹಾಗೂ ನ್ಯಾಯಾಧೀಶರು ಪಾಲ್ಗೊಂಡಿದ್ದರು.

ಹಣ, ಸಮಯ ಉಳಿತಾಯ

ಲೋಕ ಅದಾಲತ್‌ನಿಂದ ಹಣ ಮತ್ತು ಸಮಯ ಉಳಿತಾಯವಾಗಲಿದ್ದು, ಕಕ್ಷಿಗಾರರು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ ಎಂದು ನ್ಯಾಯಾಧೀಶರಾದ ವಿಜಯಲಕ್ಷ್ಮಿ ದೇವಿ ತಿಳಿಸಿದರು.

ಲೋಕ್ ಅದಾಲತ್ ನಲ್ಲಿ ನ್ಯಾಯಾಲಯದಲ್ಲಿ ಬಾಕಿ ಉಳಿದಿರುವ ರಾಜಿಯಾಗಬಹುದಾದ ಕ್ರಿಮಿನಲ್ ಪ್ರಕರಣಗಳು, ಲಘು ಕ್ರಿಮಿನಲ್ ಪ್ರಕರಣಗಳು, ಕೌಟುಂಬಿಕ ಪ್ರಕರಣಗಳು, ಸಿವಿಲ್ ವ್ಯಾಜ್ಯಗಳು, ಅಮಲ್ಜಾರಿ ಪ್ರಕರಣಗಳು, ಮೋಟಾರು ವಾಹನ ಅಪಘಾತ ಪರಿಹಾರ ಪ್ರಕರಣಗಳು, ಭೂಸ್ವಾಧೀನ ಪ್ರಕರಣಗಳು, ಹಣ ವಸೂಲಾತಿ ಪ್ರಕರಣಗಳು, ವ್ಯಾಜ್ಯ ಪೂರ್ವ ಬ್ಯಾಂಕ್ ಸಾಲ ಮರುಪಾವತಿ ಪ್ರಕರಣಗಳು, ಕಂದಾಯ ಪ್ರಕರಣಗಳು, ನೀರಿನ ಕರ ವಸೂಲಾತಿ ಪ್ರಕರಣಗಳು, ವಿದ್ಯುತ್ ಅದಾಲತ್ ಪ್ರಕರಣಗಳು ಇತ್ಯಾದಿ ಪ್ರಕರಣಗಳನ್ನು ಕಕ್ಷಿಗಾರರು ವಕೀಲರ ಮೂಲಕ ಅಥವಾ ನೇರವಾಗಿ ನ್ಯಾಯಾಲಯಕ್ಕೆ ಹಾಜರಾಗುವ ಮೂಲಕ ಅಥವಾ ವಿಡಿಯೋ ಕಾನ್ಫರೆನ್ಸ್ ಮೂಲಕ ಬಗೆಹರಿಸಿಕೊಳ್ಳಬಹುದು ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT