ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

80 ಸಾವಿರ ಜನರಿಗೆ ಲಸಿಕೆ ನೀಡುವ ಗುರಿ: ಡಿ.ಸಿ

ನಾಳೆ ಕೋವಿಡ್‌ ಲಸಿಕಾ ಮೇಳ, 1200ಕ್ಕೂ ಹೆಚ್ಚು ಕೇಂದ್ರ
Last Updated 15 ಸೆಪ್ಟೆಂಬರ್ 2021, 14:02 IST
ಅಕ್ಷರ ಗಾತ್ರ

ಹಾಸನ: ರಾಜ್ಯ ಸರ್ಕಾರದ ಆದೇಶದಂತೆ ಸೆ. 17ರಂದು ಮೆಗಾ ಲಸಿಕಾ ಅಭಿಯಾನ ಆಯೋಜಿಸಿದ್ದು, ಕನಿಷ್ಠ 80 ಸಾವಿರ ಜನರಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ ಆರ್.ಗಿರೀಶ್‌ ತಿಳಿಸಿದರು.

ವಿವಿಧ ಇಲಾಖೆ ಅಧಿಕಾರಿಗಳು, ಖಾಸಗಿ ವೈದ್ಯರು, ಖಾಸಗಿ ನರ್ಸಿಂಗ್ ಹೋಂಗಳ ಮಾಲೀಕರ ಸಭೆ ಹಾಗೂ ಎಲ್ಲಾ ತಾಲ್ಲೂಕು ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ 30 ಲಕ್ಷ ಗುರಿ ನಿಗದಿ ಪಡಿಸಲಾಗಿದೆ. ತಾಲ್ಲೂಕುವಾರು ಗುರಿ ನಿಗದಿಪಡಿಸಲಾಗಿದ್ದು, ಖಾಸಗಿ ಆಸ್ಪತ್ರೆಗಳು ಕೂಡ ಕೈಜೋಡಿಸಬೇಕು ಎಂದರು.

12 ಸಾವಿರಕ್ಕೂ ಅಧಿಕ ಲಸಿಕಾ ಕೇಂದ್ರ ತೆರೆಯಲು ಉದ್ದೇಶಿಸಲಾಗಿದ್ದು, ಪಲ್ಸ್‌ ಪೋಲಿಯೋ ಲಸಿಕೆ ಮಾದರಿಯಲ್ಲಿ ಆರೋಗ್ಯ ಸಿಬ್ಬಂದಿ ಸಾರ್ವಜನಿಕ ಸ್ಥಳಗಳಾದದ ಬಸ್‌ ನಿಲ್ದಾಣ, ರೈಲು ನಿಲ್ದಾಣ, ಶಾಳೆಗಳಲ್ಲಿ ಲಸಿಕೆ ಹಾಕಬೇಕು. ಜಿಲ್ಲೆಯಲ್ಲಿ ಗುರುತಿಸಿರುವ 8 ಸಾವಿರ ಗರ್ಭಿಣಿಯರಿಗೆ ಆದ್ಯತೆ ಮೇರೆಗೆ ಲಸಿಕೆ ನೀಡುವಂತೆ ಸೂಚಿಸಿದರು.

ಖಾಸಗಿ ನರ್ಸಿಂಗ್‌ ಹೋಂಗಳ ಶುಶ್ರೂಷಕರು, ನರ್ಸಿಂಗ್ ಕಾಲೇಜುಗಳ ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ಅಭಿಯಾನದ ಕರ್ತವ್ಯಕ್ಕೆ ನಿಯೋಜಿಸಲಾಗುತ್ತಿದೆ. ಜಿಲ್ಲೆಯ ಪ್ರತಿಯೊಬ್ಬರೂ ಲಸಿಕೆ ಹಾಕಿಸಿಕೊಂಡು ಕೋವಿಡ್‌ ಸೋಂಕಿನಿಂದ ರಕ್ಷಣೆ ಪಡೆಯಬೇಕು ಎಂದು ಹೇಳಿದರು.

ಕೋವಿಡ್ ಲಸಿಕೆ ಸಂಪೂರ್ಣ ಸುರಕ್ಷಿತವಾಗಿದ್ದು, ಹತ್ತಿರದ ಪಲ್ಸ್ ಪೋಲಿಯೋ ಬೂತ್ ಗಳನ್ನು ಲಸಿಕಾ ಕೇಂದ್ರಗಳಾಗಿ ಪರಿವರ್ತಿಸಲಾಗಿದೆ. ಕೇಂದ್ರಕ್ಕೆ ಜನರು ಬರದಿದ್ದಲ್ಲಿ ಮನೆ ಮನೆಗೆ ತೆರಳಿ ಲಸಿಕೆ ನೀಡಬೇಕು ಎಂದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ. ಎ. ಪರಮೇಶ್ ಮಾತನಾಡಿ, ಗ್ರಾಮ ಪಂಚಾಯಿತಿಗಳು ಸೂಕ್ತ ವ್ಯವಸ್ಥೆ ಕಲ್ಪಿಸಬೇಕು. ಖಾಸಗಿ ನರ್ಸಿಂಗ್ ಹೋಂಗಳ ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ಲಸಿಕೆ ಹಾಕಲು ಹಾಗೂ ನರ್ಸಿಂಗ್ ಕಾಲೇಜು ಮೊದಲ ವರ್ಷದ ವಿದ್ಯಾರ್ಥಿಗಳನ್ನು ಡಾಟಾಎಂಟ್ರಿ ಆಪರೇಟರ್ ಗಳಾಗಿ ನೇಮಿಸಿಕೊಳ್ಳುವಂತೆ ತಿಳಿಸಿದರು.

ಇದಕ್ಕೂ ಮುನ್ನ ನಡೆದ ವಿಡಿಯೋ ಸಂವಾದದಲ್ಲಿ ಮಾತನಾಡಿದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ರಾಜ್ಯಕ್ಕೆ 30 ಲಕ್ಷ ಲಸಿಕೆ ನೀಡುವಂತೆ ನಿರ್ದಿಷ್ಟ ಗುರಿ ನಿಗದಿಪಡಿಸಲಾಗಿದೆ. ನಿತ್ಯ ಮೂರುವರೆ ಲಕ್ಷದಷ್ಟು ಪೂರೈಕೆಯಾಗುತ್ತಿದ್ದು, ಲಸಿಕ ಮೇಳದಂದು 11 ಲಕ್ಷದಷ್ಟು ಲಸಿಕೆ ವಿತರಿಸಲಾಗುವುದು. ಅಂದು ಗುರಿ ಮುಟ್ಟಲು ಗ್ರಾಮೀಣ ಮಟ್ಟದಿಂದ ತಯಾರಿ ನಡೆಸಬೇಕು ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT