ನಾಲ್ಕು ದಿನಗಳಿಂದ ನಿರಂತರ ಮಳೆ ತೇವಾಂಶ ಇರುವುದರಿಂದ ಹೊಲದಲ್ಲಿ ನೀರು ನಿಲ್ಲದಂತೆ ಬಸಿಗಾಲುವೆ ಮಾಡಬೇಕು. ನೀರು ನಿಂತರೆ ಗಿಡಗಳು ಕೊಳೆಯುತ್ತವೆ. ಈ ಸಂದರ್ಭದಲ್ಲಿ ಗೊಬ್ಬರ ಕ್ರಿಮಿನಾಶಕ ಸಿಂಪಡಿಸಬಾರದು.
-ರಮೇಶ್‍ಕುಮಾರ್ ಕೃಷಿ ಇಲಾಖೆ ಸಹಾಯಕ ನಿರ್ದೇಶಕ
ಶುಂಠಿ ಬೆಳೆಯಲ್ಲಿ ನೀರು ನಿಲ್ಲದಂತೆ ಜಾಗ್ರತೆ ವಹಿಸಬೇಕು. ತಾಲ್ಲೂಕಿನಲ್ಲಿ 200 ಹೆಕ್ಟೇರ್ ಪ್ರದೇಶದಲ್ಲಿ ಶುಂಠಿ ಬೆಳೆಯಲಾಗಿದೆ. ಬೆಲೆ ಏರುಪೇರಿನಿಂದ ಶುಂಠಿ ಬೆಳೆಯುವ ಪ್ರಮಾಣ ಕಡಿಮೆಯಾಗುತ್ತಿದೆ.