ಆಲೂರು: ಕೆಂಚಮ್ಮನ ಹೊಸಕೋಟೆ ಹೋಬಳಿ ಹರಿಹಳ್ಳಿ ಗ್ರಾಮದಲ್ಲಿ ನೆಲೆಸಿರುವ ಹಾಸನಾಂಬೆ ದೇವಿಯ ಹಿರಿಯ ಸಹೋದರಿ ಕೆಂಚಾಂಬ ದೇವಿಯ ದೊಡ್ಡಜಾತ್ರೆ ಮಹೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ಜರುಗಿತು.

ಏ. 19 ರಂದು ಪಾದಪೂಜೆ, ಸಾರು, ವಸಂತ ಸೇವೆ ಮೂಲಕ ಜಾತ್ರೆ ವಿಧ್ಯುಕ್ತವಾಗಿ ಆರಂಭವಾಗಿತ್ತು. ಏ. 22 ರಂದು ಪಾದ ತೂಗುವ ಜಾತ್ರೆ ನಡೆಯಿತು. ನಂತರ ವಸಂತ ಉತ್ಸವ, ಮಹಾಮಂಗಳಾರತಿ, ಪ್ರಸಾದ ವಿನಿಯೋಗ ನೆರವೇರಿದವು. ಏ. 24 ರಂದು ಉಕ್ಕುಂದ ಪೂಜೆ ನಡೆದವು.

ಏ.25ರಂದು ರಾತ್ರಿ 8 ಗಂಟೆಗೆ ಮೂಲ ದೇವಸ್ಥಾನದಲ್ಲಿ ಉದ್ಘಾರ್ಚನೆ, ಸಪ್ತಮಾತೃಕಾ ಸಹಿತ ಕೆಂಚಾಂಬಿಕೆಗೆ ಮಹಾಪೂಜೆ, ಸುಗ್ಗಿ, ಮಹಾಮಂಗಳಾರತಿ ಜರುಗಿದವು. ಏ.26ರಂದು ಬೆಳಿಗ್ಗೆ ಮೂಲ ದೇವಸ್ಥಾನದಿಂದ ಹೊರಟ ದೇವಿಯ ಒಡವೆ, ಮುಖ, ಪಾದುಕೆ, ಬೆಳ್ಳಿ ಹೆಡಗೆ, ಪುಷ್ಪ, ಉತ್ಸವ ಮೂರ್ತಿಗಳ ಮೆರವಣಿಗೆ ದೇವಾಲಯಕ್ಕೆ ತಲುಪಿ ಅಲಂಕಾರ, ಅಭಿಷೇಕ, ಪೂಜೆ, ಬಲಿಪ್ರದಾನದ ನಂತರ ಮಹಾಮಂಗಳಾರತಿ ಸಂಪನ್ನವಾಯಿತು.

ಮಧ್ಯಾಹ್ನ 2 ಗಂಟೆಗೆ ಬನ್ನಿ ಮಂಟಪದಲ್ಲಿ ದೇವಿ ಹಾಗೂ ವೀರಭದ್ರ ದೇವರ (ಭಂಟ) ಸಮಾಗಮವಾಯಿತು. ದೇವಿಯ ದರ್ಶನಕ್ಕೆ ಬಂದಿದ್ದ ಭಕ್ತರಿಗೆ ರಾತ್ರಿ 10.30ರ ವರೆಗೂ ದೇವಿಯ ಪಾದ ಮುಟ್ಟಿ ನಮಸ್ಕರಿಸಲು ಅವಕಾಶ ಕಲ್ಪಿಸಲಾಗಿತ್ತು. ಮಂಗಳಾರತಿ, ಅಲಂಕಾರ ವಿಸರ್ಜನೆಗೊಂಡು ಮೂಲ ದೇವಸ್ಥಾನಕ್ಕೆ (ಬನ) ಶ್ರೀದೇವಿಯ ಮೆರವಣಿಗೆ ಸೇರಿದ ಬಳಿಕ ಜಾತ್ರಾ ಮಹೋತ್ಸವಕ್ಕೆ ತೆರೆ ಬಿದ್ದಿತು.

ಜಾತ್ರೆ ಸಂದರ್ಭದಲ್ಲಿ ಭಕ್ತರಿಗೆ ತೊಂದರೆ ಆಗದಂತೆ ತಹಶೀಲ್ದಾರ್ ಮಲ್ಲಿಕಾರ್ಜುನ್ ಹಾಗೂ ಆಲೂರು ಠಾಣೆಯ ಇನ್ಸ್ಪೆಕ್ಟರ್ ಮೋಹನ್ ರೆಡ್ಡಿ ಹಾಗೂ ಸಿಬ್ಬಂದಿ ಬಿಗಿ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಿದ್ದರು.

ಶಾಸಕ ಸಿಮೆಂಟ್ ಮಂಜು, ಮಾಜಿ ಶಾಸಕ ಎಚ್.ಕೆ.ಕುಮಾರಸ್ವಾಮಿ, ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಕೆ.ಎಸ್.ಮಂಜೇಗೌಡ ಸೇರಿ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ದೇವಾಲಯಕ್ಕೆ ಬಂದಿದ್ದ ಭಕ್ತರಿಗೆ ವ್ಯವಸ್ಥಾಪನ ಮಂಡಳಿ ವತಿಯಿಂದ ದಾಸೋಹದ ವ್ಯವಸ್ಥೆ ಕಲ್ಪಿಸಲಾಗಿತ್ತು.

ಸಂಸದ ಶ್ರೇಯಸ್ ಪಟೇಲ್, ಉಪ ವಿಭಾಗಾಧಿಕಾರಿ ಹುಲುಮನಿ ತಿಮ್ಮಣ್ಣ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸಿದ್ದೇಶ್ ನಾಗೇಂದ್ರ ಸೇರಿ ಸಾವಿರಾರು ಭಕ್ತರು ಜಾತ್ರೆಯಲ್ಲಿ ಪಾಲ್ಗೊಂಡಿದ್ದರು.

ದೇವಿಯ ಮೇಲೆ ಭಕ್ತಿ, ನಂಬಿಕೆ ಇಟ್ಟು ಬರುವ ಭಕ್ತರ ಬೇಡಿಕೆ ಈಡೇರಿಸುತ್ತಾಳೆ. ದೇವಿಯ ಮಹಿಮೆ ರಾಜ್ಯದಲ್ಲೂ ಪ್ರಸಿದ್ದಿ ಪಡೆದಿದೆ. ಒಳ್ಳೆಯ ಮಳೆ– ಬೆಳೆ, ಜನರು ನೆಮ್ಮದಿಯ ಜೀವನ ನಡೆಸುವಂತಾಗಲಿ ಎಂದು ಪ್ರಾರ್ಥಿಸಿದ್ದೇನೆ
ಸಿಮೆಂಟ್ ಮಂಜು, ಶಾಸಕ

ರಕ್ತ ಬೀಜಾಸುರನ ಸಂಹರಿಸಿದ ದೇವಿ

ರಕ್ತ ಬೀಜಾಸುರನ ಸಂಹಾರ ಮಾಡಿದ ಸ್ಥಳದಲ್ಲೇ ಕೆಂಚಾಂಬಿಕೆ ನೆಲೆಸಿದ್ದಾಳೆ ಎಂದು ಇತಿಹಾಸ ಹೇಳುತ್ತದೆ. ಈ ಕತೆಗೆ ಪೂರಕವಾಗಿ ಇಲ್ಲಿನ ಮಣ್ಣು ಕೆಂಪಾಗಿದೆ ಎಂದು ಪ್ರಧಾನ ಅರ್ಚಕ ಎಚ್.ಎನ್. ರಾಮಸ್ವಾಮಿ ಹೇಳುತ್ತಾರೆ.

ಮಹಿಷಾಸುರನೆಂಬ ರಾಕ್ಷಸನನ್ನು ಚಾಮುಂಡೇಶ್ವರಿ ಸಂಹರಿಸಿದ ನಂತರ ಅವನ ಮಂತ್ರಿಯಾಗಿದ್ದ ರಕ್ತಬೀಜಾಸುರ ಎಂಬ ರಾಕ್ಷಸ, ದೇವಿಯಿಂದ ತಪ್ಪಿಸಿಕೊಂಡು ಈ ಭಾಗಕ್ಕೆ ಬರುತ್ತಾನೆ. ಅವನ ಉಪಟಳ ಹೆಚ್ಚಾಗಿ ಬದುಕುವುದೇ ಕಷ್ಟವೆಂಬ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಈ ಸಂದರ್ಭದಲ್ಲಿ ಮಾನವರ ಮೊರೆಗೆ ಓಗೊಟ್ಟು ರಕ್ತ ಬೀಜಾಸುರನ ಸಂಹಾರಕ್ಕೆಂದು ಹರಿಹಳ್ಳಿಯಲ್ಲಿ ಆದಿಶಕ್ತಿ ಅವತರಿಸುತ್ತಾಳೆ ಎಂದು ವಿವರಿಸಿದರು.

ಹಾಸನಾಂಬ ದೇವಿ ಸೇರಿ ಒಟ್ಟು ಏಳು ಸಹೋದರಿಯರಲ್ಲಿ ಹಿರಿಯಳಾದ ಕೆಂಚಾಂಬ ದೇವಿಯು, ಸರಸ್ವತಿ, ಪಾರ್ವತಿ ಹಾಗೂ ಲಕ್ಷ್ಮಿಯರ ಸಂಪೂರ್ಣ ಶಕ್ತಿ ಪಡೆದು ಇಲ್ಲಿಗೆ ಬಂದು ರಾಕ್ಷಸರೊಡನೆ ಯುದ್ಧ ಮಾಡಿ ಅನೇಕರನ್ನು ಸಂಹಾರ ಮಾಡುತ್ತಾಳೆ. ಆದರೆ ರಕ್ತ ಬೀಜಾಸುರನನ್ನು ಕೊಲ್ಲುವುದು ಸುಲಭದ ಮಾತಾಗಿರುವುದಿಲ್ಲ. ಅವನ ಒಂದು ಹನಿ ರಕ್ತ ನೆಲಕ್ಕೆ ಬಿದ್ದರೆ ಅವನಷ್ಟೇ ಶಕ್ತಿಯುಳ್ಳ ಸಹಸ್ರ ರಾಕ್ಷಸರು ಹುಟ್ಟುತ್ತಿದ್ದರು. ಹೀಗಾಗಿ ಕೆಂಚಾಂಬಿಕೆಯು ಈತನನ್ನು ಉಪಾಯದಿಂದ ಸಂಹರಿಸುವ ಸಂಕಲ್ಪ ಮಾಡಿ, ತನ್ನ ನಾಲಿಗೆಯನ್ನು ನೆಲದ ಮೇಲೆ ಹಾಸಿ ಅದರ ಮೇಲೆ ರಾಕ್ಷಸ ಬರುವಂತೆ ಮಾಡಿ ಕೊಂದಳು ಎಂದು ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.