ಆಲೂರು: ‘ಕೆರೆ, ಕಟ್ಟೆಗಳನ್ನು ಉಳಿಸಿಕೊಳ್ಳದಿದ್ದರೆ ಭವಿಷ್ಯದಲ್ಲಿ ಅಂತರ್ಜಲ ಮಟ್ಟ ಕಡಿಮೆಯಾಗಿ ರೈತರು ಸಂಕಷ್ಟಕ್ಕೆ ಸಿಲುಕಬೇಕಾಗುತ್ತದೆ’ ಎಂದು ಶಾಸಕ ಸಿಮೆಂಟ್ ಮಂಜು ಆತಂಕ ವ್ಯಕ್ತಪಡಿಸಿದರು.

ಕುಂದೂರು ಹೋಬಳಿ ಗಂಗರ ಗ್ರಾಮದಲ್ಲಿ ₹50 ಲಕ್ಷ ವೆಚ್ಚದಲ್ಲಿ ದೊಡ್ಡಕೆರೆ ದುರಸ್ತಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

‘ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯಿಂದ ದುರಸ್ತಿ ಕಾಮಗಾರಿ ನಡೆಯಲಿದೆ. ಏರಿಯ ಜಗಲ್ ತೆಗೆದು ದುರಸ್ತಿ, ಕೆರೆ ತೂಬು ಮತ್ತು ಕೋಡಿ ದುರಸ್ತಿ, ಕೋಡಿ ಹಳ್ಳ ಹಾಗೂ ಏರಿ ತಳಭಾಗಗಳಲ್ಲಿ ತಡೆಗೋಡೆ ನಿರ್ಮಾಣ ಮಾಡಲಾಗುವುದು’ ಎಂದು ಹೇಳಿದರು.

‘ಕೆರೆ ದುರಸ್ತಿ ಮಾಡುವುದರಿಂದ ಸುಮಾರು 100 ಎಕರೆ ಪ್ರದೇಶಕ್ಕೆ ಸಮರ್ಪಕ ನೀರಾವರಿ ಸೌಲಭ್ಯ ದೊರಕುತ್ತದೆ. ಕೆರೆಯಲ್ಲಿ ನೀರಿನ ಸಂಗ್ರಹ ಸಾಮರ್ಥ್ಯ ಹೆಚ್ಚಳವಾಗುತ್ತದೆ, ಅಂತರ್ಜಲ ಮಟ್ಟ ಹೆಚ್ಚುತ್ತದೆ’ ಎಂದರು.

ಮುಖಂಡರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-36-1281405349

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.