ಆಲೂರು: ‘ಮಹಾತ್ಮರ ಆದರ್ಶಗಳ ಅಳವಡಿಸಿಕೊಂಡು ಬದುಕಿದರೆ ಜೀವನ ಸಾರ್ಥಕವಾಗುತ್ತದೆ’ ಎಂದು ತಹಶೀಲ್ದಾರ್ ಮಲ್ಲಿಕಾರ್ಜುನ ತಿಳಿಸಿದರು.

ಪಟ್ಟಣದ ಮಿನಿ ವಿಧಾನಸೌಧ ಆವರಣದಲ್ಲಿ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ಪಟ್ಟಣ ಪಂಚಾಯಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ ಬಾಬು ಜಗಜೀವನರಾಂ 119ನೇ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

‘ಪ್ರತಿಯೊಬ್ಬ ಮಹಾತ್ಮರು ಸಮಾನತೆಗೆ ಮಾನ್ಯತೆ ನೀಡಿದ್ದಾರೆ. ಜನಸಾಮಾನ್ಯರಿಗೆ ಅವರ ಆದರ್ಶಗಳ ಅರಿವು ಮೂಡಿಸುವ ಉದ್ದೇಶದಿಂದ ಸರ್ಕಾರ ಜಯಂತಿಗಳನ್ನು ಆಚರಿಸುತ್ತದೆ’ ಎಂದರು.

ಸಾಹಿತಿ ಎಂ.ಜಿ.ಪರಮೇಶ್ ಮಡಬಲು ಮಾತನಾಡಿ, ‘ಬಾಬು ಜಗಜೀವನರಾಂ ಅವರು ತಮ್ಮ 50 ವರ್ಷಗಳ ರಾಜಕೀಯ ಜೀವನದಲ್ಲಿ ಶೋಷಿತ ವರ್ಗದ ಅಭಿವೃದ್ಧಿಗೆ ಶ್ರಮಿಸಿದರು. ಅವರು ಹಾಗೂ ಬಿ.ಆರ್.ಅಂಬೇಡ್ಕರ್, ಸಮಾನತೆ, ಶಿಕ್ಷಣ ಜಾಗೃತಿ ಮೂಲಕ ಶೋಷಿತರು ತಮ್ಮ ಹಕ್ಕುಗಳನ್ನು ಪಡೆಯುವಂತೆ ಶ್ರಮಿಸಿದರು’ ಎಂದರು.

ಬಾಬು ಜಗಜೀವನರಾಂ ಅವರ ಭಾವಚಿತ್ರವನ್ನು ಪಟ್ಟಣದಲ್ಲಿ ಮೆರವಣಿಗೆ ನಡೆಸಲಾಯಿತು. ಬಿ.ಆರ್.ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಯಿತು.

ಸಮುದಾಯದಲ್ಲಿ ಸಾಧನೆ ಮಾಡಿದ ಬನ್ನಾರಿ ಆಲೂರು, ನಿವೃತ್ತ ಶಿಕ್ಷಕ ಎ.ಟಿ.ಮಂಜುನಾಥ್, ಪ.ಪಂ.ಮಾಜಿ ಸದಸ್ಯೆ ರತ್ನಮ್ಮ ಮತ್ತು ವಿದ್ಯಾರ್ಥಿಗಳಾದ ರತನ್, ಹರ್ಷಿಣಿ, ಸಿಂಚನ, ದೇವರಾಜು ಅವರನ್ನು ಸನ್ಮಾನಿಸಲಾಯಿತು.

ಮಾದಿಗ ದಂಡೊರ ಸಮಿತಿ ಅಧ್ಯಕ್ಷ ಪುಟ್ಟರಾಜು, ಸಮಾಜದ ಮುಖಂಡರಾದ ಬಸವರಾಜು, ರಂಗಯ್ಯ, ಪುಟ್ಟರಾಜು, ವೆಂಕಟಯ್ಯ, ದೇವರಾಜು, ಅರಸಯ್ಯ, ಬಿಆರ್ಸಿ ನಾಗರಾಜ್, ಪ.ಪಂ.ಮುಖ್ಯಾಧಿಕಾರಿ ಮಂಜುನಾಥ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಕೌಸರ್ ಅಹ್ಮದ್, ವೇದಾವತಿ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260406-36-1992157168

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.