ಆಲೂರು: ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಶಾಸಕ ಸಿಮೆಂಟ್ ಮಂಜುರವರು ಕೆರೆ, ಕೆರೆ ಕೋಡಿ ಅಭಿವೃದ್ಧಿ ಮತ್ತು ಚೆಕ್ ಡ್ಯಾಂ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದರು.

ಕೆರೆಗಳ ದುರಸ್ತಿ ಮತ್ತು ಚೆಕ್ ಡ್ಯಾಂ ನಿರ್ಮಾಣ ಮಾಡುವುದರಿಂದ ನೂರಾರು ಎಕರೆ ಭೂ ಪ್ರದೇಶಕ್ಕೆ ಬೆಳೆ ಮಾಡಲು ಅನುಕೂಲವಾಗಲಿದೆ. ರೈತರಿಗೆ ಒಂದು ಹನಿ ನೀರು ಸಹ ವರದಾನವಾಗಿದೆ. ನೀರು ಪೋಲಾಗದಂತೆ ತಡೆದು ಕೃಷಿಗೆ ಉಪಯೋಗ ಮಾಡಿಕೊಳ್ಳಬೇಕು. ಈ ಉದ್ದೇಶದಿಂದ ಕೆರೆ, ಕೆರೆ ಕೋಡಿಗಳ ಅಭಿವೃದ್ಧಿ ಮತ್ತು ಅಗತ್ಯವಿರುವ ಸ್ಥಳದಲ್ಲಿ ಚೆಕ್ ಡ್ಯಾಂ ನಿರ್ಮಾಣ ಮಾಡಲಾಗುತ್ತಿದೆ ಎಂದರು.

ಸರ್ಕಾರದಿಂದ ದೊರಕುವ ಅನುದಾನದಲ್ಲಿ ಹಂತ ಹಂತವಾಗಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು. ಕಾಮಗಾರಿ ನಡೆಯುವ ಸಂದರ್ಭದಲ್ಲಿ ಸ್ಥಳೀಯರು, ಕಾಮಗಾರಿ ಗುಣಮಟ್ಟದ ಬಗ್ಗೆ ಜಾಗೃತರಾಗಿರಬೇಕು. ಶಾಶ್ವತ ಮತ್ತು ಗುಣಮಟ್ಟದ ಕೆಲಸ ಮಾಡಿದರೆ ಜನಸಾಮಾನ್ಯರು ಜನಪ್ರತಿನಿಧಿಗಳು, ಅಧಿಕಾರಿಗಳು ಮತ್ತು ಗುತ್ತಿಗೆದಾರರನ್ನು ಸದಾ ಸ್ಮರಿಸುತ್ತಾರೆ ಎಂದರು.

ಮಗ್ಗೆ ಗ್ರಾಮ ಪಂಚಾಯಿತಿ ವ್ಯಾಪ್ತಿ ವಾಸುದೇವರನಹಳ್ಳಿ ಗ್ರಾಮದ ಪರಿಮಿತಿಯಲ್ಲಿ, ಹಳ್ಳಕ್ಕೆ ಅಡ್ಡಲಾಗಿ ₹56.50 ಲಕ್ಷ, ಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸಹಳ್ಳಿ ಗ್ರಾಮದಲ್ಲಿ ₹53 ಲಕ್ಷ ವೆಚ್ಚದಲ್ಲಿ ಹೊಸಕಟ್ಟೆ ಕೆರೆ ಅಭಿವೃದ್ಧಿ, ಇದೇ ಗ್ರಾಮದಲ್ಲಿ ₹1.12 ಕೋಟಿ ವೆಚ್ಚದಲ್ಲಿ ಚೆಕ್ ಡ್ಯಾಂ ನಿರ್ಮಾಣ, ಕದಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಟ್ಟಣ ಗ್ರಾಮದಲ್ಲಿ ₹19.5 ಲಕ್ಷ ವೆಚ್ಚದಲ್ಲಿ ಕೆರೆ ಕೋಡಿ ಅಭಿವೃದ್ಧಿ ಮತ್ತು ಮಗ್ಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಾಸುದೇವರಹಳ್ಳಿ ಗ್ರಾಮದ ಪರಿಮಿತಿಯಲ್ಲಿ ₹56.50 ಲಕ್ಷ ವೆಚ್ಚದಲ್ಲಿ ಚೆಕ್ ಡ್ಯಾಂ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಸ್ಥಳೀಯ ಗ್ರಾಮಸ್ಥರು, ಅಧಿಕಾರಿಗಳು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260414-36-168485022

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.