ಸೋಮವಾರ, 7 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಪಠ್ಯ ಪುಸ್ತಕಗಳ ಅಧ್ಯಯನ ಮಾಡಿ: ಸಿಮೆಂಟ್ ಮಂಜು

Published : 1 ಅಕ್ಟೋಬರ್ 2024, 14:02 IST
Last Updated : 1 ಅಕ್ಟೋಬರ್ 2024, 14:02 IST
ಫಾಲೋ ಮಾಡಿ
Comments

ಆಲೂರು: ‘ಕಂಪ್ಯೂಟರ್ ಯುಗದಲ್ಲಿ ವಿದ್ಯಾರ್ಥಿಗಳು ಜಾಲತಾಣಗಳ ವ್ಯಸನಿಗಳಾಗದೆ  ಪಠ್ಯ ಪುಸ್ತಕಗಳ ಅಧ್ಯಯನವನ್ನು ಮರೆಯಬಾರದು’ ಎಂದು ಶಾಸಕ ಸಿಮೆಂಟ್ ಮಂಜು ತಿಳಿಸಿದರು.

ಪಟ್ಟಣದ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಕಂಪ್ಯೂಟರ್ ತರಬೇತಿ ಕೇಂದ್ರ ಉದ್ಘಾಟಿಸಿ ಅವರು ಮಾತನಾಡಿದರು.

ಪಠ್ಯಪುಸ್ತಕ ಓದುವ ಹವ್ಯಾಸ ಬೆಳೆಸಿಕೊಂಡರೆ ಭವಿಷ್ಯದ ಜೀವನ ಸುಗಮವಾಗಲಿದೆ.   ಕಾಲೇಜಿಗೆ ವಿದ್ಯಾರ್ಥಿಗಳನ್ನು ದಾಖಲಾತಿ ಮಾಡಿಸುವುದರ ಮೂಲಕ ಕಾಲೇಜು ಅಭಿವೃದ್ಧಿಗೆ ಶ್ರಮಿಸಬೇಕು ಎಂದರು.

ಪ್ರಾಂಶುಪಾಲ ಟಿ.ಪಿ. ಪುಟ್ಟರಾಜು,  ಕಂಪ್ಯೂಟರ್ ಶಿಕ್ಷಣ ಅತ್ಯವಶ್ಯಕವಾಗಿದೆ. ಕಾಲೇಜಿನಲ್ಲಿ ನುರಿತ ಉಪನ್ಯಾಸಕರೊಂದಿಗೆ ಉಚಿತ ಕಂಪ್ಯೂಟರ್ ಶಿಕ್ಷಣ ತರಬೇತಿ ನೀಡಲಾಗುತ್ತಿದೆ ಎಂದರು.

ತರಬೇತಿ ಪಡೆದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ನೀಡಲಾಯಿತು. ಪಟ್ಟಣ ಪಂಚಾಯಿತಿ ಅಧ್ಯಕ್ಷ್ಷೆ ತಾಹಿರಾ ಬೇಗಂ, ಭೈರಾಪುರ ಗ್ರಾ. ಪಂ. ಅಧ್ಯಕ್ಷೆ ಹೇಮಾ ಮಂಜೇಗೌಡ, ನಿವೃತ್ತ ಪ್ರಾಂಶುಪಾಲ ಶಂಕರಲಿಂಗೇಗೌಡ, ಸಿಡಿಸಿ ಸದಸ್ಯರಾದ ಎ.ಎಚ್. ರಮೇಶ್, ಟಿ. ಕೆ. ಕುಮಾರಸ್ವಾಮಿ, ಬಾಲಾಲೋಚನ ಮೋಹನ್ ಕುಮಾರ್, ಶಿವಪ್ರಸಾದ್, ಮನು, ಪುರುಷೋತ್ತಮ್‌ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT