ಆಲೂರು: ‘ಮಳೆಯಿಂದ ಮನೆ ಹಾನಿಗೊಳಗಾದವರಿಗೆ ಸರ್ಕಾರದಿಂದ ದೊರಕುವ ಪರಿಹಾರ ಧನವನ್ನು ಶೀಘ್ರ ತಲುಪಿಸಬೇಕು’ ಎಂದು ಶಾಸಕ ಸಿಮೆಂಟ್ ಮಂಜು ತಹಶೀಲ್ದಾರ್ ಅವರಿಗೆ ಸೂಚಿಸಿದರು.

ಶುಕ್ರವಾರ ಸುರಿದ ಭಾರಿ ಮಳೆಯಿಂದ ಗೇಕರವಳ್ಳಿ ಮತ್ತು ಕಗ್ಗರವಳ್ಳಿ ಗ್ರಾಮಗಳಲ್ಲಿ ಹಾನಿಗೊಳಗಾದ ಮನೆಗಳಿಗೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಎರಡೂ ಗ್ರಾಮಗಳಲ್ಲಿ ಸುಮಾರು 14ಕ್ಕೂ ಹೆಚ್ಚು ಮನೆಗಳ ಹೆಂಚು ಮತ್ತು ಶೀಟ್ ಹಾರಿ ಹೋಗಿರುವುದರಿಂದ, ನಿವಾಸಿಗಳು ವಾಸ ಮಾಡುವುದು ಕಷ್ಟವಾಗಿದೆ. ಕೂಡಲೇ ಪರಿಹಾರ ಕೊಡಲು ಕ್ರಮ ಕೈಗೊಳ್ಳಬೇಕು ಎಂದರು.

ತಹಶೀಲ್ದಾರ್ ಮಲ್ಲಿಕಾರ್ಜುನ ಅವರು ಪ್ರತಿಕ್ರಿಯಿಸಿ, ‘ಈ ಬಗ್ಗೆ ಗ್ರಾಮ ಆಡಳಿತಾಧಿಕಾರಿ ಮತ್ತು ಪಿಆರ್ಡಿಇ ಎಂಜಿನಿಯರ್ ವರದಿ ನೀಡಿದ ನಂತರ, ಸರ್ಕಾರದ ಸುತ್ತೋಲೆಯಂತೆ ಅಧಿಕೃತ ನಿವಾಸಿಗಳಿಗೆ ಪರಿಹಾರ ಚೆಕ್ ವಿತರಿಸಲಾಗುವುದು’ ಎಂದರು.

‘ಮಳೆ, ಗಾಳಿಯಿಂದ ತಾಲ್ಲೂಕಿನಲ್ಲಿ ಸುಮಾರು 8 ವಿದ್ಯುತ್ ಕಂಬಗಳು ಧರೆಗುರುಳಿವೆ. ದುರಸ್ತಿ ಕಾರ್ಯ ಸಾಗಿದೆ’ ಎಂದು ಸೆಸ್ಕ್ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ರವಿ ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260405-36-404448278

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.