ಆಲೂರು: ‘ಪಟ್ಟಣ ಪಂಚಾಯಿತಿ ವ್ಯಾಪ್ತಿಗೊಳಪಡುವ ವಿವಿಧ ವಾರ್ಡ್ಗಳಲ್ಲಿ ಸುಮಾರು ₹70 ಲಕ್ಷ ವೆಚ್ಚದಲ್ಲಿ ರಸ್ತೆ, ಚರಂಡಿ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು’ ಎಂದು ಶಾಸಕ ಸಿಮೆಂಟ್ ಮಂಜು ತಿಳಿಸಿದರು.

ಪಟ್ಟಣದ 4ನೇ ವಾರ್ಡ್ನ ಚರಂಡಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ‘ಪುರಸಭಾ ಕಾರ್ಯಾಲಯದ ಪಕ್ಕದಿಂದ ದೊಡ್ಡಿಬೀದಿ ಮುಖಾಂತರ ಪ್ರಕೃತಿ ನಗರ ರಸ್ತೆ ಅಭಿವೃದ್ಧಿ, 4ನೇ ವಾರ್ಡ್ನ ಸುಣ್ಣದಬೀದಿ ರಸ್ತೆ, ವಾರ್ಡ್ 1 ಮತ್ತು 2ರಲ್ಲಿ ಕಾಂಕ್ರೀಟ್ ರಸ್ತೆ ಕಾಮಗಾರಿ, ವಾರ್ಡ್ 3ರಲ್ಲಿ ಡಾಂಬರೀಕರಣ, 11ರಲ್ಲಿ ಸಿ.ಸಿ. ರಸ್ತೆ ಅಭಿವೃದ್ಧಿ ಕಾಮಗಾರಿ, 9ರಲ್ಲಿ ಹಳೆ ಸಂತೆ ಬೀದಿ ರಸ್ತೆ ಕಾಮಗಾರಿ, ಬಿ.ಎಂ. ರಸ್ತೆ ಸರ್ಕಾರಿ ಆಸ್ಪತ್ರೆ ಹತ್ತಿರ ಚರಂಡಿಗಳಿಗೆ ಕವರಿಂಗ್ ಸ್ಲ್ಯಾಬ್ ನಿರ್ಮಾಣ ಮತ್ತು 10 ನೇ ವಾರ್ಡ್ನಲ್ಲಿ ರಸ್ತೆಗೆ ಮರು ಡಾಂಬರೀಕರಣ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು’ ಎಂದರು.

ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮಂಜುನಾಥ್ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260407-36-1418976423

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.