ಆಲೂರು: 12ನೇ ಶತಮಾನದಲ್ಲಿ ಕಾಯಕ ತತ್ವದ ಮೂಲಕ ಸಮಸಮಾಜ ನಿರ್ಮಿಸಿದ ಮಹಾನ್ ಜ್ಞಾನಿ ಬಸವಣ್ಣನವರು ಎಂದು ತಹಶೀಲ್ದಾರ್ ಮಲ್ಲಿಕಾರ್ಜುನ್ ತಿಳಿಸಿದರು.

ಪಟ್ಟಣದ ಮಿನಿ ವಿಧಾನಸೌಧದ ಸಭಾಂಗಣದಲ್ಲಿ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ಆಯೋಜಿಸಿದ್ದ ವಿಶ್ವಗುರು ಬಸವಣ್ಣನವರ ಜಯಂತಿ ಉದ್ಘಾಟಿಸಿ ಅವರು ಮಾತನಾಡಿದರು.

ವಚನಗಳ ಮೂಲಕ ಸಮಾಜವನ್ನು ತಿದ್ದಿದ ಬಸವಣ್ಣನವರು ಅನುಭವ ಮಂಟಪ ನಿರ್ಮಿಸಿ ಸಮಾನತೆ ಬಗ್ಗೆ ವಿಶ್ವಕ್ಕೆ ಸಾರಿ ಮಾದರಿಯಾದರು. ಅವರ ತತ್ವ, ವಚನಗಳು ಸಾರ್ವಕಾಲಿಕ ಮೌಲ್ಯಗಳಾಗಿದ್ದು, ಅದನ್ನು ಪ್ರತಿಯೊಬ್ಬರೂ ಅನುಸರಿಸಬೇಕು ಎಂದರು.

12 ನೇ ಶತಮಾನ ತನ್ನದೇ ಆದ ಮಹತ್ವ ಪಡೆದಿದ್ದು, ಜಗಜ್ಯೋತಿ ಬಸವೇಶ್ವರರು ಸರಳ ವಚನಗಳ ಮೂಲಕ ಸಮಾಜದಲ್ಲಿರುವ ಅನಿಷ್ಟಗಳ ನಿರ್ಮೂಲನೆಗೆ ಪ್ರಯತ್ನಿಸಿದರು. ಎಲ್ಲ ವರ್ಗಗಳ ಜನರಲ್ಲಿ ಸಮಾನತೆ ತರಲು ಹಗಲಿರಲು ಶ್ರಮಿಸಿದ ಇವರ ಆದರ್ಶಗಳು ನಮಗೆಲ್ಲ ಅನುಕರಣೀಯ ಎಂದರು.

ಮುಖ್ಯ ಭಾಷಣಕಾರರಾಗಿದ್ದ ಶಿಕ್ಷಕ ಇಂದ್ರೇಶ್ ಮಾತನಾಡಿ, ‘ವಿಶ್ವಗುರು ಬಸವಣ್ಣನವರ ತತ್ವದರ್ಶಗಳನ್ನು ಅಳವಡಿಸಿಕೊಳ್ಳುವುದಲ್ಲದೇ, ಕಾಯಕ ಸಂಸ್ಕೃತಿ ಬೆಳೆಸಿಕೊಂಡಾಗ ಮಾತ್ರ ಕಾಯಕವೇ ಕೈಲಾಸ ಎಂಬ ಬಸಣ್ಣನವರ ತತ್ವ ಅನುಷ್ಠಾನ ಆಗಲಿದೆ. ಮನುಕುಲಕ್ಕೆ ಮಾನವೀಯತೆ ಸಂದೇಶ ಸಾರಿದವರು’ ಎಂದರು.

ನಿವೃತ್ತ ಸೈನಿಕ ರಾಜಪ್ಪ ಬಡಾವಣೆಯ ನಿವಾಸಿ ವಿರೂಪಾಕ್ಷಯ್ಯ ಅವರನ್ನು ಸನ್ಮಾನಿಸಲಾಯಿತು. ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮಂಜುನಾಥ್, ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣೆಗೌಡ, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ರಮೇಶ್ ಕುಮಾರ್, ಶಿರಸ್ತೇದಾರ್ ಅಂಕೇಗೌಡ, ತಾಲ್ಲೂಕು ಪಂಚಾಯಿತಿ ಎಡಿ ಕೇಶವಮೂರ್ತಿ, ವೀರಶೈವ ಲಿಂಗಾಯತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ರೇಣುಕಾಪ್ರಸಾದ್, ಉಪಾಧ್ಯಕ್ಷ ಡಿ.ಎಸ್ ಜಯಣ್ಣ, ಖಜಾಂಚಿ ಟೀಕರಾಜು, ಸಹ ಕಾರ್ಯದರ್ಶಿ ಡಾ.ಜಯರಾಜ್, ಅಖಿಲ ಭಾರತ ವೀರಶೈವ ಮಹಾಸಭಾದ ತಾಲ್ಲೂಕು ಘಟಕದ ಅಧ್ಯಕ್ಷ ಅಜಿತ್ ಸಿ., ಕಾರ್ಯದರ್ಶಿ ಚೇತನ್, ಹಿಂದುಳಿದ ವರ್ಗಗಳ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ ಶಂಕರಾಚಾರ್ಯ ಸೇರಿದಂತೆ ಸಮಾಜದ ಮುಖಂಡರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260421-36-757393907

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.