ಶಾಸಕ ಸಿಮೆಂಟ್ ಮಂಜು ಗುರುವಾರ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಭೇಟಿ ಮಾಡಿ ಆಂಬುಲೆನ್ಸ್ ಒದಗಿಸಲು ಒತ್ತಾಯಿಸಿದರು.
ತಾಲ್ಲೂಕಿನ ರಾಯರಕೊಪ್ಪಲು ಅರೋಗ್ಯ ಉಪ ಕೇಂದ್ರಕ್ಕೆ ಆಂಬುಲೆನ್ಸ್ ನೀಡಬೇಕು. ಹೃದಯಾಘಾತ ಘಟನೆಗಳು ಹೆಚ್ಚಾಗುತ್ತಿದ್ದು ಸರ್ಕಾರ ಕೂಡಲೆ ಸಾವಿಗೆ ಕಾರಣ ಏನು ಎಂಬುದರ ತನಿಖೆ ನಡೆಸಬೇಕು
ಎಚ್.ಕೆ. ಕುಮಾರಸ್ವಾಮಿ ಮಾಜಿ ಸಚಿವ
ಜಿಲ್ಲಾ ಪಂಚಾಯಿತಿ ಸದಸ್ಯನಾಗಿದ್ದಾಗ ರಾಯರಕೊಪ್ಪಲು ಪ್ರಾಥಮಿಕ ಆರೋಗ್ಯ ಉಪ ಕೇಂದ್ರಕ್ಕೆ ಆಂಬುಲೆನ್ಸ್ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಲಾಗಿತ್ತು. ಕೂಡಲೇ ಆಂಬುಲೆನ್ಸ್ ಸೇವೆ ಒದಗಿಸಬೇಕು
ಕೆ.ಎಸ್. ಮಂಜೇಗೌಡ ನಾಗರಿಕರ ಹೋರಾಟ ಸಮಿತಿ ಅಧ್ಯಕ್ಷ
ರಾಯರಕೊಪ್ಪಲು ಪ್ರಾಥಮಿಕ ಉಪ ಆರೋಗ್ಯ ಕೇಂದ್ರಕ್ಕೆ ಆಂಬುಲೆನ್ಸ್ ಒದಗಿಸಲು ಸಂಬಂಧಿಸಿದವರಿಗೆ ಮಾಹಿತಿ ನೀಡಲಾಗುವುದು. ಕೂಡಲೆ ಸುಸಜ್ಜಿತ ಆಂಬುಲೆನ್ಸ್ ಒದಗಿಸಲು ಕ್ರಮ ಕೈಗೊಳ್ಳಲಾಗುವುದು
ಡಾ. ಅನಿಲ್ ಜಿಲ್ಲಾ ಆರೋಗ್ಯಾಧಿಕಾರಿ
ಪ್ರತಿ ಹೋಬಳಿ ಕೇಂದ್ರಗಳಿಗೆ ತಲಾ ಒಂದು ಆಂಬುಲೆನ್ಸ್ 108 ವಾಹನಗಳ ಸಂಖ್ಯೆ ಹೆಚ್ಚಿಸುವುದು ಹೃದಯಾಘಾತದ ಬಗ್ಗೆ ಶೀಘ್ರ ಪರಿಶೀಲನೆ ನಡೆಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಭೇಟಿ ನೀಡಿ ಒತ್ತಾಯಿಸಿದ್ದೇನೆ