ಹಾಸನ: ಮುಖಚರ್ಯೆ ಗುರುತಿಸುವ ಕ್ರಮ (ಎಫ್ಆರ್ಎಸ್) ನಿಲ್ಲಿಸಲು ಒತ್ತಾಯಿಸಿ ಕಪ್ಪು ದಿನ ಆಚರಿಸಿದ ಅಂಗನವಾಡಿ ನೌಕರರ ಸಂಘದ ವತಿಯಿಂದ ಸಹಿ ಸಂಗ್ರಹದ ಮನವಿಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೂಲಕ ಸಚಿವರಿಗೆ ಗುರುವಾರ ಸಲ್ಲಿಸಲಾಯಿತು.

‘ಮಾನವ ಅಭಿವೃದ್ಧಿ ಸೂಚ್ಯಂಕಕ್ಕಿರುವ ಏಕೈಕ ಯೋಜನೆ ಐಸಿಡಿಎಸ್ ಮಾತ್ರ. ಈ ಯೋಜನೆಗೆ 50 ವರ್ಷಗಳಾಗುತ್ತಾ ಬರುತ್ತಿದೆ. ಈ ಯೋಜನೆಯನ್ನು ಸರಳೀಕರಿಸಿ ಫಲಾನುಭವಿಗಳನ್ನು ಆಕರ್ಷಿಸಲು ಸರ್ಕಾರಗಳು ಕ್ರಮ ರೂಪಿಸಬೇಕಿತ್ತು. ಅದರ ಬದಲಾಗಿ ಸಂಕೀರ್ಣ ಮಾಡಲಾಗುತ್ತಿದೆ. ಯಾವುದೇ ಸೌಲಭ್ಯಗಳನ್ನು ಕೊಡದೇ ಮುಖಚರ್ಯೆ ಗುರ್ತಿಸುವ ಕ್ರಮ (ಎಫ್ಆರ್ಎಸ್) ಅಳವಡಿಸಿದ್ದರಿಂದ ಕ್ಷೇತ್ರ ಮಟ್ಟದಲ್ಲಿ ಹಲವಾರು ತೊಂದರೆಗಳನ್ನು ಅನುಭವಿಸುವಂತಾಗಿದೆ’ ಎಂದು ತಿಳಿಸಿದರು.

ಎಫ್ಆರ್ಎಸ್ ಮುಖಾಂತರ ಸಂಗ್ರಹಿಸುವ ಫಲಾನುಭವಿಗಳ ವೈಯಕ್ತಿಕ ಮಾಹಿತಿ ಸೋರಿಕೆಯಾಗುತ್ತದೆ. ವಿಪರೀತ ಸೈಬರ್ ವಂಚನೆಗಳು ಹೆಚ್ಚುತ್ತಿರುವುದು ತಿಳಿದಿದೆ. ಆಧಾರ ಕಾರ್ಡ್ ಇಲ್ಲ ಎಂಬ ನೆಪದಲ್ಲಿ ಸಬ್ಸಿಡಿ ಹಾಗೂ ಉಚಿತವಾಗಿ ಸಿಗುವ ಸೌಲಭ್ಯಗಳಿಂದ ಫಲಾನುಭವಿಗಳು ವಂಚಿತರಾಗಬಾರದು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಈ ಆಶಯಗಳನ್ನು ಸಂರಕ್ಷಣೆ ಮಾಡಬೇಕಾದ ಸರ್ಕಾರಗಳು ಇಂದು ಎಫ್ಆರ್ಎಸ್ ಕಡ್ಡಾಯಗೊಳಿಸುವ ಮುಖಾಂತರ ಫಲಾನುಭವಿಗಳ ಹಕ್ಕನ್ನು ನಿರಾಕರಿಸುತ್ತಿವೆ ಎಂದು ದೂರಿದರು.

ತನ್ನ ಪಾಲಿನ ಶೇ 60ವಂತಿಗೆ ನೀಡಬೇಕಾದ ಕೇಂದ್ರ ಸರ್ಕಾರ ಎಫ್ಆರ್ಎಸ್ನಂತಹ ನಿರ್ಬಂಧ ಹಾಕುವ ಮೂಲಕ ತನ್ನ ಪಾಲಿನ ಹಣ ಕಡಿಮೆ ಮಾಡಲು ಮುಂದಾಗಿದೆ. ಚಟುವಟಿಕೆ ಆಧಾರದಲ್ಲಿ ಹಣ ಬಿಡುಗಡೆ ಮಾಡುವ ವಿಧಾನಗಳು ಮತ್ತು ಭಾರತದಲ್ಲಿ ಐಸಿಡಿಎಸ್ ಫಲಾನುಭವಿಗಳನ್ನು ಕಡಿಮೆ ತೋರಿಸಿ ಹಣ ಕಡಿತ ಮಾಡುವ ಯೋಜನೆ ಇದಾಗಿದೆ ಎಂದು ಆರೋಪಿಸಿದರು.

ಎಫ್ಆರ್ಎಸ್ ರದ್ದು ಮಾಡಿ ಐಸಿಡಿಎಸ್ ಯೋಜನೆ ಕಾಯಂ ಮಾಡಬೇಕು. ಗುಜರಾತ್ ಹೈಕೋರ್ಟ್ ತೀರ್ಪಿನಂತೆ ‘ಸಿ’ ಮತ್ತು ‘ಡಿ’ ಗುಂಪಿನ ನೌಕರರೆಂದು ಪರಿಗಣಿಸಬೇಕು. 2018ರಿಂದ ಅನ್ವಯವಾಗುವಂತೆ ವೇತನ ಹೆಚ್ಚಿಸಿ, ಫಲಾನುಭವಿಗಳ ಘಟಕ ವೆಚ್ಚ ಹೆಚ್ಚಿಸಬೇಕು ಎಂದು ಒತ್ತಾಯಿಸಿದರು.

‘ಮನವಿಗೆ ಸ್ಪಂದಿಸದಿದ್ದರೆ ನವೆಂಬರ್ ಮತ್ತು ಡಿಸೆಂಬರ್ನಲ್ಲಿ ಕೇಂದ್ರ ಸಚಿವರ ಮನೆಯ ಮುಂದೆ ಅನಿರ್ದಿಷ್ಟ ಅವಧಿಯ ಹೋರಾಟ ರೂಪಿಸಲಾಗುವುದು’ ಎಂದು ಎಚ್ಚರಿಸಿದರು.

ಜಿಲ್ಲಾ ಘಟಕದ ಅಧ್ಯಕ್ಷೆ ಎಂ.ಬಿ. ಪುಷ್ಪಾ, ತಾಲ್ಲೂಕು ಘಟಕದ ಅಧ್ಯಕ್ಷೆ ಟಿ.ಎಚ್. ಜಯಂತಿ, ಪದಾಧಿಕಾರಿಗಳಾದ ಮೀನಾಕ್ಷಿ, ರಿಹಾನಾಬಾನು, ಬಿ.ಎಸ್. ಮಧು, ರಿಜ್ವಾನಾ ಬಾನು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.