ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟೆಕ್ಸಾಸ್ ಶಾಲೆಯಲ್ಲಿ ಗುಂಡಿನ ದಾಳಿ: 10 ಸಾವು

Last Updated 18 ಮೇ 2018, 19:30 IST
ಅಕ್ಷರ ಗಾತ್ರ

ಹ್ಯೂಸ್ಟನ್‌: ಅಮೆರಿಕದ ಟೆಕ್ಸಾಸ್‌ನಲ್ಲಿ ವಿದ್ಯಾರ್ಥಿಯೊಬ್ಬ ಶಾಲೆಯಲ್ಲಿ ಗುಂಡು ಹಾರಿಸಿದ ಪರಿಣಾಮ ವಿದ್ಯಾರ್ಥಿಗಳು ಸೇರಿದಂತೆ ಕನಿಷ್ಠ ಹತ್ತು ಮಂದಿ ಸಾವನ್ನಪ್ಪಿದ್ದಾರೆ.

ಇಲ್ಲಿನ ಸಂಟಾ ಫೆ ಹೈಸ್ಕೂಲ್‌ನಲ್ಲಿ ಶುಕ್ರವಾರ ಈ ಘಟನೆ ನಡೆದಿದ್ದು, ಅಧಿಕಾರಿಯೊಬ್ಬರಿಗೆ ಗುಂಡೇಟು ಬಿದ್ದಿದೆ. ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಹಲವು ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ಕೂಡ ಗಾಯಗೊಂಡಿದ್ದಾರೆ. ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅವರ ಪೈಕಿ ಒಬ್ಬ ಗುಂಡು ಹಾರಿಸಿದ ವ್ಯಕ್ತಿ ಎನ್ನಲಾಗಿದೆ.

ಕಳೆದ ಏಳು ದಿನಗಳಲ್ಲಿ ಶಾಲಾ ಮಕ್ಕಳ ಮೇಲೆ ನಡೆದಿರುವ ಗುಂಡಿನ ದಾಳಿಯ ಮೂರನೇ ಪ್ರಕರಣ ಇದಾಗಿದೆ. ಈ ವರ್ಷ ಇಂತಹ 22 ಪ್ರಕರಣಗಳು ನಡೆದಿವೆ.

ಫ್ಲಾರಿಡಾದ ಪಾರ್ಕ್‌ಲ್ಯಾಂಡ್‌ನ ಹೈಸ್ಕೂಲ್‌ ಒಂದರಲ್ಲಿ ಇದೇ ಫೆಬ್ರುವರಿಯಲ್ಲಿ ಬಂದೂಕುಧಾರಿಯೊಬ್ಬ ಯದ್ವಾತದ್ವಾ ಗುಂಡು ಹಾರಿಸಿ 17 ಮಂದಿಯನ್ನು ಕೊಂದಿದ್ದ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT