ಅಪಪ್ರಚಾರ ನಿಲ್ಲಿಸಿ, ಅಭಿವೃದ್ಧಿಗೆ ಶ್ರಮಿಸಿ

7
ಯಡಿಯೂರಪ್ಪ ವಿರುದ್ಧ ರೇವಣ್ಣ ವಾಗ್ದಾಳಿ

ಅಪಪ್ರಚಾರ ನಿಲ್ಲಿಸಿ, ಅಭಿವೃದ್ಧಿಗೆ ಶ್ರಮಿಸಿ

Published:
Updated:
Deccan Herald

ಹಾಸನ: ‘ಜೆಡಿಎಸ್ ವರಿಷ್ಠ ಎಚ್‌.ಡಿ.ದೇವೇಗೌಡರು ಬಿಜೆಪಿ ನಾಯಕರಿಂದ ಪಾಠ ಕಲಿಯಬೇಕಿಲ್ಲ. ವಾಜಪೇಯಿ ಬೆಂಬಲ ನೀಡುವುದಾಗಿ ಹೇಳಿದರೂ ಪ್ರಧಾನಿ ಹುದ್ದೆಯನ್ನೇ ತೊರೆದು ಬಂದವರು’ ಎಂದು ಬಿಜೆಪಿ ನಾಯಕರಿಗೆ ಸಚಿವ ಎಚ್‌.ಡಿ.ರೇವಣ್ಣ ತಿರುಗೇಟು ನೀಡಿದರು.

‘ಪ್ರಧಾನಿ ಹುದ್ದೆಯಿಂದ ಗೌಡರು ಕೆಳಗಿಳಿದ ವೇಳೆ ಬೆಂಬಲ ನೀಡುವುದಾಗಿ ವಾಜಪೇಯಿ ಚೀಟಿ ಬರೆದು ಕಳುಹಿಸಿದ್ದರು. ಗೌಡರು ಅದನ್ನು ನಿರಾಕರಿಸಿದರು. ಕೆಲಸ ಇಲ್ಲದ ಕಾರಣ ಬಿಜೆಪಿ ನಾಯಕರು ಟೀಕೆ ಮಾಡಿಕೊಂಡಿದ್ದಾರೆ. ಯಡಿಯೂರಪ್ಪ ಅಧಿಕಾರದಲ್ಲಿದ್ದಾಗ ಉತ್ತರ ಕರ್ನಾಟಕವನ್ನು ಏಕೆ ಅಭಿವೃದ್ಧಿ ಪಡಿಸಲಿಲ್ಲ. ಕೇಂದ್ರದಿಂದ ಯಾವುದಾದರೂ ಯೋಜನೆಗಳನ್ನು ಮಂಜೂರು ಮಾಡಿಸಿಕೊಂಡು ಬಂದಿದ್ದರೆ ತಿಳಿಸಲಿ’ ಎಂದು ಸವಾಲು ಹಾಕಿದರು.

‘ಕುಮಾರಸ್ವಾಮಿ ಅಧಿಕಾರ ಹಸ್ತಾಂತರ ಮಾಡದ ಕಾರಣ ಬಿಜೆಪಿ ಅಧಿಕಾರಕ್ಕೆ ಬಂತು. ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಎ, ಬಿ ಟೀಂ ಎಂದು ಹೇಳದಿದ್ದರೆ ಬಿಜೆಪಿಗೆ 30 ಸ್ಥಾನಗಳು ಕಡಿಮೆ ಬರುತ್ತಿತ್ತು’ ಎಂದು ವಿಶ್ಲೇಷಿಸಿದರು.

‘ಸಿದ್ದರಾಮಯ್ಯ ಸಿ.ಎಂ. ಆಗಿದ್ದಾಗಲೂ ಯಡಿಯೂರಪ್ಪ ಟೀಕೆ ಮಾಡುತ್ತಿದ್ದರು. ಅಪಪ್ರಚಾರ ಮಾಡುವುದನ್ನು ನಿಲ್ಲಿಸಿ, ಅಭಿವೃದ್ಧಿಗೆ ಶ್ರಮಿಸಲಿ. ಕೇಂದ್ರದ ಮೇಲೆ ಒತ್ತಡ ಹೇರಿ ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿ ರೈತರು ಮಾಡಿರುವ ಸಾಲವನ್ನು ಮನ್ನಾ ಮಾಡಿಸಲಿ’ ಎಂದು ಸಲಹೆ ನೀಡಿದರು.

‘ಎಚ್‌.ವಿಶ್ವನಾಥ್‌ ಹಿರಿಯ ರಾಜಕಾರಣಿ. ಸಚಿವ ಸ್ಥಾನ ವಂಚಿತರು. ಹಾಗಾಗಿ ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ಮಾಡಲಾಗಿದೆಯೇ ಹೊರತು ಸಿದ್ದರಾಮಯ್ಯ ಅವರಿಗೆ ಟಾಂಗ್‌ ಕೊಡಲು ಅಲ್ಲ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

 ಹಾಸನ ನಗರಕ್ಕೆ ಆರು ರಸ್ತೆ ಕಾಮಗಾರಿಗಳು ಮಂಜೂರಾಗಿದ್ದು, ಟೆಂಡರ್‌ ಸಹ ಕರೆಯಲಾಗಿದೆ. ಇಪ್ಪತ್ತು ದಿನದಲ್ಲಿ ಅಂತಿಮಗೊಳ್ಳಲಿದೆ. ಚುನಾವಣೆ ಬಳಿಕ ಕೆಲಸ ಆರಂಭಗೊಳ್ಳಲಿದೆ ಎಂದು ಮಾಹಿತಿ ನೀಡಿದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !