ಅರಕಲಗೂಡು: ‘ಮಹಾಪುರುಷರು ಯಾವುದೇ ಒಂದು ಸಮುದಾಯಕ್ಕೆ ಸೀಮಿತರಲ್ಲ, ಸಮಾಜದ ಅಭ್ಯದಯಕ್ಕಾಗಿಕ್ಕೆ ಶ್ರಮಿಸಿದ ಇವರ ಜಯಂತಿ ಯನ್ನು ಎಲ್ಲ ಸಮುದಾಯವರೂ ಒಟ್ಟಾಗಿ ಆಚರಿಸಿದಾಗ ಮಾತ್ರ ಮುಂದಿನ ಪೀಳಿಗೆಗೆ ದಾರಿದೀಪವಾಗುತ್ತದೆ’ ಎಂದು ಶಾಸಕ ಎ. ಮಂಜು ತಿಳಿಸಿದರು.

ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಬಸವೇಶ್ವರ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ‘ಬಸವಣ್ಣ, ಬುದ್ಧದ, ಕುವೆಂಪು, ಅಂಬೇಡ್ಕರ್ ಅವರಂತಹ ಸಮಾಜ ಸುಧಾರಕರನ್ನು ಯಾವುದೇ ಸಮುದಾಯ, ಜಾತಿಗಳಿಗೆ ಸೀಮಿತ ಗೊಳಿಸಬಾರದು. ಬಸವಣ್ಣನವರ ಆದರ್ಶಗಳನ್ನು ಮೈಗೂಡಿಸಿಕೊಂಡು ಉತ್ತಮ ಸಮಾಜ ನಿರ್ಮಿಸಲು ಮುಂದಾಗಬೇಕಿದೆ’ ಎಂದರು.

ತಾಲ್ಲೂಕು ವೀರಶೈವ ಲಿಂಗಾಯಿತ ಸಮಾಜದ ಅಧ್ಯಕ್ಷ ದೊಡ್ಡಬೆಮ್ಮತ್ತಿ ಸುರೇಶ್ ಮಾತನಾಡಿ, ‘ಶೀಘ್ರದಲ್ಲೆ ಬಸವಣ್ಣನವರ ಜಯಂತಿಯನ್ನು ಅದ್ದೂರಿಯಾಗಿ ಹಮ್ಮಿಕೊಳ್ಳುತ್ತಿದ್ದು ಅಂದು ಸಮುದಾಯ ಭವನ ನಿರ್ಮಾಣ ಹಾಗೂ ಬಸವಣ್ಣನವರ ಪುತ್ಥಳಿ ನಿರ್ಮಾಣ ಕಾರ್ಯಗಳಿಗೆ ಚಾಲನೆ ನೀಡಲಾಗುವುದು’ ಎಂದರು.

ಪ್ರೌಢಶಾಲಾ ಶಿಕ್ಷಕ ಶಿವಶಂಕರ್ ಬಸವಣ್ಣನವರ ಜೀವನ ಮತ್ತು ಸಾಧನೆಗಳ ಕುರಿತು ಪ್ರಧಾನ ಭಾಷಣ ಮಾಡಿದರು. ತಹಶೀಲ್ದಾರ್ ಕೆ.ಸಿ.ಸೌಮ್ಯ, ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಪುಟ್ಟರಾಜ್, ಮುಖಂಡರಾದ ನೈಗೆರೆ ಚನ್ನಕೇಶವೇಗೌಡ, ಎನ್. ರವಿಕುಮಾರ್, ಕೆ.ಸಿ.ಲೋಕೇಶ್, ಮಾಗಲು ಬಸವರಾಜ್, ವೀರಾಜ್, ಡಿಎಸ್ ಎಸ್ ಮುಖಂಡ ಚಂದ್ರಣ್ಣ, ನಿವೃತ್ತ ಶಿಕ್ಷಕ ಮಲ್ಲೇಶ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260421-36-946677760

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.