ಅರಕಲಗೂಡು: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಏ. 17ರಂದು ಪಟ್ಟಣದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ರೈತ ಸಂಘ ಪುಟ್ಟಣ್ಣಯ್ಯ ಬಣದ ತಾಲೂಕು ಪ್ರಧಾನ ಕಾರ್ಯದರ್ಶಿ ಎಸ್. ತಿಮ್ಮೇಗೌಡ ತಿಳಿಸಿದರು.

ಅಡಿಕೆಬೊಮ್ಮನಹಳ್ಳಿ ಏತ ನೀರಾವರಿ ಯೋಜನೆ ಕಾಮಗಾರಿ ಮುಗಿದು 22 ವರ್ಷ ಕಳೆದರೂ ಭೂಮಿ ಕಳೆದುಕೊಂಡ ಸಂತ್ರಸ್ತ ರೈತರಿಗೆ ಸಮರ್ಪಕವಾಗಿ ಪರಿಹಾರ ಒದಗಿಸಿಲ್ಲ. ಕಾಮಗಾರಿಯನ್ನೂ ಸರಿಯಾಗಿ ಪೂರ್ಣಗೊಳಿಸಿಲ್ಲ. ಅಂಕನಾಯಕನ ಹಳ್ಳಿಕೊಪ್ಪಲು, ಉಲಿವಾಲ, ವಡ್ಡರಹಳ್ಳಿ, ನೇರಲಹಳ್ಳಿ, ನೇರಲಹಳ್ಳಿಕೊಪ್ಪಲು, ನೈಗೆರೆ, ಮರಡಿ ಭಾಗಕ್ಕೆ ಯೋಜನೆ ಮೂಲಕ ನಾಲೆಗೆ ನೀರು ಹರಿಸಿಲ್ಲ, ಅಧಿಕಾರಿಗಳು ರೈತರ ಹಿತ ನಿರ್ಲಕ್ಷಿಸಿದ್ದಾರೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.

ಪಟ್ಟಣದ ಕೊಳಚೆ ನೀರು ರಾಜಕಾಲುವೆಯಲ್ಲಿ ಹರಿದು ಚೋಳೇನಹಳ್ಳಿ, ಕಾಶೀಪುರ, ನೈಗೆರೆ ಭಾಗದ ಕೆರೆ ಕಟ್ಟೆಗಳಿಗೆ ಹರಿದು ಕಲುಷಿತ ನೀರನ್ನು ಜಾನುವಾರುಗಳು ಕುಡಿದು ರೋಗ ರುಜಿನಗಳಿಗೆ ತುತ್ತಾಗುತ್ತಿವೆ. ಈ ಸಮಸ್ಯೆ ಬಗೆಹರಿಸಬೇಕು. ಕೃಷಿ ಪಂಪ್ಸೆಟ್ ಗಳಿಗೆ ಸರಿಯಾಗಿ ವಿದ್ಯುತ್ ಪೂರೈಕೆ ಮಾಡಬೇಕು ಎಂದು ಆಗ್ರಹಿಸಲು ಪಟ್ಟಣದ ಅನಕೃ ವೃತ್ತದಿಂದ ತಾಲ್ಲೂಕು ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಲಿದೆ ಎಂದರು.

ಸಂಘದ ಅಧ್ಯಕ್ಷ ಕೆ.ಕೆ. ರವಿ, ಸದಸ್ಯರಾದ ಮುತ್ತೇಗೌಡ, ಸ್ವಾಮಿಗೌಡ, ಲಕ್ಷ್ಮಣಶೆಟ್ಟಿ, ರೇವಣ್ಣ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260417-36-1118435

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.