ಅರಕಲಗೂಡು: ಗೃಹ ಬಳಕೆ ಅಡುಗೆ ಅನಿಲ ಸಿಲಿಂಡರ್ಗಳನ್ನು ಯಾವುದೆ ದೂರುಗಳು ಬರದಂತೆ ವ್ಯವಸ್ಥಿತವಾಗಿ ಸರಬರಾಜು ಮಾಡುವಂತೆ ಗ್ಯಾಸ್ ವಿತರಕರಿಗೆ ತಹಶೀಲ್ದಾರ್ ಕೆ. ಸಿ. ಸೌಮ್ಯ ಸೂಚನೆ ನೀಡಿದದರು.

ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಗ್ಯಾಸ್ ವಿತರಕರು, ಬಳಕೆದಾರರು ಹಾಗೂ ಸಂಘ ಸಂಸ್ಥೆಗಳ ಮುಖಂಡರ ಸಭೆ ನಡೆಸಿದ ಅವರು, ಸಮರ್ಪಕವಾಗಿ ಗ್ಯಾಸ್ ವಿತರಣೆಯಾಗದ ಕುರಿತು ಬಳಕೆದಾರರಿಂದ ಹಾಗೂ ಸಂಘ, ಸಂಸ್ಥೆಗಳ ಮುಖಂಡರಿಂದ ವ್ಯಾಪಕ ದೂರುಗಳು ಬಂದಿವೆ. ಈ ರೀತಿಯ ದೂರುಗಳಿಗೆ ಅವಕಾಶ ನೀಡದಂತೆ ಹಾಗೂ ಬಳಕೆದಾರರಿಗೆ ತೊಂದರೆಯಾಗದಂತೆ ವಿತಕರು ಸೂಕ್ತ ಗಮನ ಹರಿಸಬೇಕು ಎಂದರು.

ಬುಕ್ ಮಾಡಿರುವ ಗ್ರಾಹಕರಿಗೆ ನಿಗದಿತ ಸಮಯಕ್ಕೆ ಸರಿಯಾಗಿ ಸಿಲಿಂಡರ್ ವಿತರಿಸಿ. ವಾಣಿಜ್ಯ ಉದ್ದೇಶಕ್ಕೆ ಗೃಹ ಬಳಕೆ ಸಿಲಿಂಡರ್ ನೀಡಬಾರದು. ವ್ಯಾಪಾರಸ್ಥರು ಸಹ ಇದನ್ನು ಕಟ್ಟು ನಿಟ್ಟಾಗಿ ಪಾಲನೆ ಮಾಡಬೇಕು. ವಾಣಿಜ್ಯ ಉದ್ದೇಶಕ್ಕಾಗಿ ಇರುವ ಸಿಲಿಂಡರ್ಗಳನ್ನಷ್ಟೆ ಬಳಸಬೇಕು. ಗೃಹ ಬಳಕೆ ಸಿಲಿಂಡರ್ ಬಳಸುತ್ತಿರುವುದು ಕಂಡು ಬಂದರೆ ಆಹಾರ ಇಲಾಖೆ ಅಧಿಕಾರಿಗಳೊಂದಿಗೆ ದಾಳಿ ನಡೆಸಿ ಸಿಲಿಂಡರ್ಗಳನ್ನು ಮುಟ್ಟುಗೋಲು ಹಾಕಿಕೊಂಡು ಪ್ರಕರಣ ದಾಖಲಿಸುವುದಾಗಿ ಎಚ್ಚರಿಸಿದರು.

ವಿತರಣೆಯಲ್ಲಿ ಲೋಪದೋಶಗಳ ಕಂಡು ಬಂದಲ್ಲಿ ಆಹಾರ ಇಲಾಖೆ ಅಧಿಕಾರಿಗಳು ಇಲ್ಲವೆ ತಮಗೆ ದೂರು ನೀಡಿದರೆ ತಕ್ಷಣ ಕ್ರಮ ಕೈಗೊಳ್ಳುವುದಾಗಿ ಹೇಳಿದರು.

ಸಭೆಯಲ್ಲಿ ಪಾಲ್ಗೊಂಡಿದ್ದ ಕರವೇ, ರೈತ ಸಂಘ ಹಾಗೂ ಇತರೆ ಸಂಘಟನೆಗಳ ಮುಖಂಡರು ಹಾಗೂ ಸಾರ್ವಜನಿಕರು ಗ್ಯಾಸ್ ಸಿಲಿಂಡರ್ ಸರಬರಾಜಿನಲ್ಲಿ ಉಂಟಾಗಿರುವ ಸಮಸ್ಯೆಗಳ ಕುರಿತು ಮಾಹಿತಿ ನೀಡಿ ಅಗತ್ಯ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು. ಆಹಾರ ನಿರೀಕ್ಷಕ ಮಂಜುನಾಥ್ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-36-1008497594

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.