ಅರಕಲಗೂಡು: ‘ವೈದ್ಯರ ಹೊಂದಾಣಿಕೆ ಕೊರತೆಯಿಂದ ರೋಗಿಗಳಿಗೆ ಉತ್ತಮ ಸೇವೆ ದೊರೆಯುತಿಲ್ಲ ಎಂಬ ದೂರುಗಳು ವ್ಯಾಪಕವಾಗಿ ಕೇಳಿ ಬರುತ್ತಿದ್ದು, ಅದನ್ನು ಸರಿಪಡಿಸಿಕೊಂಡು ರೋಗಿಗಳಿಗೆ ಗುಣಮಟ್ಟದ ಸೇವೆ ನೀಡಲು ವೈದ್ಯರು ಗಮನ ನೀಡಿ’ ಎಂದು ಶಾಸಕ ಎ. ಮಂಜು ವೈದ್ಯರಿಗೆ ಸೂಚನೆ ನೀಡಿದರು.

ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಗುರುವಾರ ಆರೋಗ್ಯ ರಕ್ಷಾ ಸಮಿತಿ ಸಭೆ ನಡೆಸಿದ ಅವರು, ‘ವೈದ್ಯರು ಆಸ್ಪತ್ರೆಗೆ ಬರುವ ರೋಗಿಗಳಿಗೆ ಉತ್ತಮ ಸೇವೆ ನೀಡುವಲ್ಲಿ ವಿಫಲರಾಗಿರುವ ಕಾರಣಕ್ಕೆ ರೋಗಿಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಇದೇ ಪ್ರವೃತ್ತಿ ಮುಂದುವರೆದರೆ ಕ್ರಮ ಕೈಗೊಳ್ಳಲಾಗುವುದು’ ಎಂದು ಎಚ್ಚರಿಸಿದರು. ಬಹಳಷ್ಟು ರೋಗಿಗಳು ರಕ್ತ ಹೀನತೆಯಿಂದ ಬಳಲುತ್ತಿರುವುದು ಆತಂಕದ ವಿಷಯ. ಇದರ ಬಗ್ಗೆ ಸಾರ್ವಜನಿಕವಾಗಿ ಜಾಗೃತಿ ಮೂಡಿಸಿ ಎಂದರು.

ಸಾರ್ವಜನಿಕ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ.ಸ್ವಾಮಿಗೌಡ. ಆರೋಗ್ಯ ಸಮಿತಿ ಉಪಾಧ್ಯಕ್ಷ ಎ. ಎಂ. ರಘು, ಸದಸ್ಯ ಗಣೇಶಶೆಟ್ಟಿ. ಜಬಿ ಉಲ್ಲಾ. ಬಾಣದಹಳ್ಳಿ ಗಣೇಶ್ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-36-1198576505

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.