ಅರಕಲಗೂಡು: ಸ್ವಸ್ಥ ಸಮಾಜ ನಿರ್ಮಾಣ ಸಮಿತಿ ವತಿಯಿಂದ ಕಣ್ಣಿನ ಉಚಿತ ತಪಾಸಣಾ ಶಿಬಿರ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ತಾಲ್ಲೂಕಿನ ರಾಮನಾಥಪುರದ ಭಾಗ್ಯಶ್ರೀ ಕಲ್ಯಾಣ ಮಂಟಪದಲ್ಲಿ ಮೇ 15ರಂದು ಬೆಳಿಗ್ಗೆ 7 ರಿಂದ ಮಧ್ಯಾಹ್ನ 12 ಗಂಟೆವರೆಗೆಹಮ್ಮಿಕೊಳ್ಳಲಾಗಿದೆ ಎಂದು ಸಮಿತಿ ಅಧ್ಯಕ್ಷ ಪ್ರದೀಪ್ ರಾಮಸ್ವಾಮಿ ತಿಳಿಸಿದರು.

ಕೊಯಮತ್ತೂರಿನ ಅರವಿಂದ ಕಣ್ಣಿನ ಆಸ್ಪತ್ರೆಯ ತಜ್ಞ ವೈದ್ಯರು ಕಣ್ಣಿನ ಪೊರೆ, ಗ್ಲಾಕೋಮ, ನೀರು ಸೋರುವಿಕೆ, ಕಣ್ಣಿನಲ್ಲಿ ಗೀಜು ಕಟ್ಟಿರುವುದು, ಹತ್ತಿರ ಮತ್ತು ದೂರ ದೃಷ್ಟಿದೋಷ, ಕಣ್ಣಿನಲ್ಲಿ ಬಿರುಕು ಉಂಟಾಗುವುದು, ವಾರೆಕಣ್ಣು, ರಾತ್ರಿ ಕುರುಡುತನ ಮುಂತಾದ ಕಣ್ಣಿನ ಸಮಸ್ಯೆಗಳ ಕುರಿತು ತಪಾಸಣೆ ನಡೆಸಿ ಚಿಕಿತ್ಸೆ ಮತ್ತು ಸಲಹೆ ನೀಡುವರು. ಶಸ್ತ್ರಚಿಕಿತ್ಸೆ ಅಗತ್ಯವಿದ್ದವರಿಗೆ ಕೊಯಮತ್ತೂರಿನ ಆಸ್ಪತ್ರೆಗೆ ಕರೆದೊಯ್ದು ಉಚಿತವಾಗಿ ಶಸ್ತ್ರಚಿಕಿತ್ಸೆ ನಡೆಸಲಾಗುವುದು ಎಂದು ಮಂಗಳವಾರ ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದರು.

ಶಸ್ತ್ರ ಚಿಕಿತ್ಸೆಗೆ ಒಳಗಾಗುವವರು ಆಧಾರ್ ಕಾರ್ಡ್ ಪ್ರತಿ, ಮೊಬೈಲ್ಫೋನ್ ಸಂಖ್ಯೆಯನ್ನು ಕಡ್ಡಾಯವಾಗಿ ತರಬೇಕು ಎಂದು ತಿಳಿಸಿದರು.

ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯು ಪರೀಕ್ಷೆಯ ಕಲಾ, ವಾಣಿಜ್ಯ, ವಿಜ್ಞಾನ ವಿಭಾಗದಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುವುದು. ಹೆಚ್ಚಿನ ಮಾಹಿತಿಗೆ ಮೊ ಸಂಖ್ಯೆ 9740970162, 9535035462, 9741805319 ಇಲ್ಲಿ ಸಂಪರ್ಕಿಸುವಂತೆ ಕೋರಿದರು. ಸಮಿತಿಯ ಮುಖಂಡರಾದ ಬಸವರಾಜ್, ಸಿದ್ದರಾಮು, ಮೋಹನ್, ನಸ್ರುಲ್ಲಾ ಟಿಪ್ಪು, ಸೋಮಣ್ಣ, ಬಾಬು, ಗಂಗಾಧರ್ ಗೋಷ್ಠಿಯಲ್ಲಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-36-1915210220

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.