ಅರಕಲಗೂಡು: ವಾಸದ ಮನೆಗೆ ಕ್ಯಾಂಟರ್ ನುಗ್ಗಿ ನಜ್ಜುಗುಜ್ಜಾದ ವಾಹನದಲ್ಲಿ ಸಿಲುಕಿದ್ದ ಚಾಲಕನನ್ನು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಿಸಿದ ಘಟನೆ ಪಟ್ಟಣದ ಸಾಲಗೇರಿ ಬಡಾವಣೆಯಲ್ಲಿ ಭಾನುವಾರ ತಡರಾತ್ರಿ ನಡೆದಿದೆ.

ಕೊಣನೂರು ಕಡೆಯಿಂದ ಚಿಕ್ಕಮಗಳೂರಿಗೆ ಹೋಗುತ್ತಿದ್ದ ವಾಹನ ಚಾಲಕನ ಅಜಾಗರೂಕತೆಯಿಂದ ರಸ್ತೆ ಬದಿ ಇದ್ದ ರಂಗನಾಥ್ ಅವರ ವಾಸದ ಮನೆಯೊಳಗೆ ನುಗ್ಗಿದೆ. ಕುಟುಂಬದ ಸದಸ್ಯರು ಸ್ವಲ್ಪದರಲ್ಲೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ನಜ್ಜುಗುಜ್ಜಾದ ವಾಹನದಲ್ಲಿ ಚಾಲಕ ದೀಪಕ್ ಸಿಲುಕಿಕೊಂಡು ಹೊರಬರಲಾರದೆ ಒದ್ದಾಡುತ್ತಿದ್ದ. ಸ್ಥಳಕ್ಕೆ ಬಂದ ಅಗ್ನಿಶಾಮಕ ಠಾಣೆ ಅಧಿಕಾರಿ ಎ.ವಿ. ಪರಮೇಶ್ವರಗೌಡ ಮತ್ತು ಸಿಬ್ಬಂದಿ ಒಂದು ಗಂಟೆಕಾಲ ಕಾರ್ಯಾಚಾರಣೆ ನಡೆಸಿ ಚಾಲಕನನ್ನು ರಕ್ಷಣೆ ಮಾಡಿ ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಿದರು. ಈತ ಚಿಕ್ಕಮಗಳೂರು ಜಿಲ್ಲೆ ಅಂಬಳೆ ಹೋಬಳಿ ಸಿರಗಾಪುರ ಗ್ರಾಮದವನು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-36-2029519975

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.