ಅರಕಲಗೂಡು (ಹಾಸನ): ತಾಲ್ಲೂಕಿನ ಕಳ್ಳಿಮುದ್ದನಹಳ್ಳಿ ಗ್ರಾಮದಲ್ಲಿ ಹಲವು ದಿನಗಳಿಂದ ಪ್ರಾಣಿಗಳ ಮೇಲೆ ದಾಳಿ ನಡೆಸಿ, ಗ್ರಾಮಸ್ಥರಿಗೆ ಭಯವನ್ನುಂಟು ಮಾಡಿದ್ದ ಚಿರತೆ ಕೊನೆಗೂ ಶನಿವಾರ ಬೋನಿಗೆ ಬಿದ್ದಿದೆ.
ಕಳ್ಳಿ ಮುದ್ದನಹಳ್ಳಿ ಗ್ರಾಮದ ಜಮೀನುಗಳಿಗೆ ಆಗಾಗ್ಗೆ ನುಗ್ಗಿ ಹಸು, ಕುರಿ, ನಾಯಿ ಸೇರಿದಂತೆ ಸಾಕು ಪ್ರಾಣಿಗಳ ಮೇಲೆ ದಾಳಿ ನಡೆಸುತ್ತಿದ್ದ ಚಿರತೆಯ ಬಗ್ಗೆ ಮಾಹಿತಿ ಅರಿತ ಅರಣ್ಯ ಇಲಾಖೆ ಸಿಬ್ಬಂದಿ, ಚಿರತೆಯ ಸೆರೆಗೆ ಯೋಜನೆ ರೂಪಿಸಿದ್ದರು. ಲೋಕೇಶ್ ಎಂಬುವವರ ಜಮೀನಿನಲ್ಲಿ ಶುಕ್ರವಾರ ರಾತ್ರಿ ಬೋನು ಇಟ್ಟು ಚಿರತೆಯನ್ನು ಸೆರೆಹಿಡಿದಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.