ಹಾಸನ: ‘ಜಿಲ್ಲೆಯ ಅರಕಲಗೂಡು ಕ್ರೀಡಾಂಗಣದಲ್ಲಿ ದಲಿತ ಸಂಘಟನೆಗಳ ಒಕ್ಕೂಟದಿಂದ ಮೇ 30ರಂದು ಬೆಳಿಗ್ಗೆ 11ಕ್ಕೆ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ’ ಎಂದು ಸಮಿತಿ ಹಿರಿಯ ಮುಖಂಡ ಎಚ್.ಕೆ. ಸಂದೇಶ್ ತಿಳಿಸಿದರು.

‘ಕಾರ್ಯಕ್ರಮಕ್ಕೆ ಅಂಬೇಡ್ಕರ್ ಅವರ ಮೊಮ್ಮಗ ಆನಂದ್ರಾಜ್ ಯಶವಂತ್ ಅಂಬೇಡ್ಕರ್ ಆಗಮಿಸಲಿದ್ದಾರೆ’ ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ’ ಎಂದರು.

‘ಜಿಲ್ಲೆಯ ದಲಿತ ಸಮುದಾಯಕ್ಕೆ ರಾಜಕೀಯ ಹಾಗೂ ಸಾಮಾಜಿಕ ಅವಕಾಶಗಳು ಸಮಾನವಾಗಿ ದೊರಕಬೇಕು. ಒಳಮೀಸಲಾತಿ ವಿಚಾರದಲ್ಲಿ ಎಡ–ಬಲ ಸಮುದಾಯಗಳ ನಡುವೆ ಉಂಟಾಗಿರುವ ಭಿನ್ನಾಭಿಪ್ರಾಯಗಳನ್ನು ತೊಡೆದು ಹಾಕಿ ಎಲ್ಲರೂ ಒಗ್ಗಟ್ಟಿನಿಂದ ಮುನ್ನಡೆಯಬೇಕು’ ಎಂದು ಸಲಹೆ ನೀಡಿದರು.

‘ನಿವೃತ್ತ ಮುಖ್ಯ ಶಿಕ್ಷಕ ಜವರಯ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ವಿವಿಧ ದಲಿತ ಸಂಘಟನೆಗಳ ಮುಖಂಡರು, ಸರ್ಕಾರಿ ನೌಕರರು, ವಕೀಲರು, ಸಾಹಿತಿಗಳು ಹಾಗೂ ಸಾಮಾಜಿಕ ಹೋರಾಟಗಾರರು ಭಾಗವಹಿಸಲಿದ್ದಾರೆ’ ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ವಕೀಲರಾದ ಬಿ.ಸಿ. ರಾಜೇಶ್, ಸೋಮಶೇಖರ್, ಜವರಯ್ಯ, ಲಿಂಗರಾಜು, ಗಣೇಶ್ ವೇಲಾಪುರಿ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-36-793555115

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.