ಅರಕಲಗೂಡು: ಮನುಷ್ಯನಿಗೆ ಕಣ್ಣು ಅತ್ಯಂತ ಪ್ರಮುಖ ಅಂಗವಾಗಿದ್ದು ಕಣ್ಣಿನ ಆರೋಗ್ಯದ ಕುರಿತು ಹೆಚ್ಚಿನ ಜಾಗ್ರತೆ ವಹಿಸುವಂತೆ ಮಾಜಿ ಶಾಸಕ ಎ.ಟಿ. ರಾಮಸ್ವಾಮಿ ಸಲಹೆ ಮಾಡಿದರು.

ತಾಲ್ಲೂಕಿನ ರಾಮನಾಥಪುರದ ಭಾಗ್ಯಶ್ರೀ ಕಲ್ಯಾಣ ಮಂಟಪದಲ್ಲಿ ಸ್ವಸ್ಥ ಸಮಾಜ ನಿರ್ಮಾಣ ಸಮಿತಿ ಹಾಗೂ ಕೊಯಮತ್ತೂರು ಅರವಿಂದ ಕಣ್ಣಿನ ಅಸ್ಪತ್ರೆ ಸಹಯೋಗದಲ್ಲಿ ಶುಕ್ರವಾರ ಏರ್ಪಡಿಸಿದ್ದ ಉಚಿತ ನೇತ್ರ ತಪಾಸಣಾ ಶಿಬಿರ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಪೌಷ್ಟಿಕ ಅಹಾರ ಸೇವನೆ ಜತೆಗೆ ಜೊತೆಗೆ ನಿಗದಿತ ಸಮಯಕ್ಕೆ ಪರೀಕ್ಷೆ ಮಾಡಿಸಿಕೊಳ್ಳುವ ಮೂಲಕ ಕಣ್ಣಿನ ರಕ್ಷಣೆ ಮಾಡಿಕೊಳ್ಳಬೇಕು ಎಂದರು.

ಶಿಬಿರದಲ್ಲಿ ಅರವಿಂದ ಕಣ್ಣಿನ ಆಸ್ಪತ್ರೆ ವೈದ್ಯರ ತಂಡ 290 ಜನರಿಗೆ ಕಣ್ಣಿನ ತಪಾಸಣೆ ನಡೆಸಿ ಚಿಕಿತ್ಸೆ ಮತ್ತು ಸಲಹೆ ನೀಡಿದರು. 43 ಜನರನ್ನು ಉಚಿತ ಶಸ್ತ್ರ ಚಿಕಿತ್ಸೆಗಾಗಿ ಕರೆದೊಯ್ಯಲಾಯಿತು. ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯು ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಸ್ವಸ್ಥ ಸಮಾಜ ನಿರ್ಮಾಣ ಸಮಿತಿ ಅಧ್ಯಕ್ಷ ಪ್ರದೀಪ್ ರಾಮಸ್ವಾಮಿ, ಅಶಾರಾಣಿ ರಾಮಸ್ವಾಮಿ, ಡಾ. ವಿಜಯಕಾಂತ್, ಮುಖಂಡರಾದ ಶ್ರೀನಿಧಿ, ಕೃಷ್ಣೇಗೌಡ, ಉಪ್ಪರಿಕೆಗೌಡ, ವಿರೂಪಾಕ್ಷ, ವೆಂಕಟೇಶ್, ಬಿ.ಸಿ. ವೀರೇಶ್, ಕಾಳೇಗೌಡ, ಸಿದ್ದರಾಮು, ಪಾಂಡುರಂಗ, ದಿವಾಕರ್, ಸ್ವಾಮೀಗೌಡ, ದಶರಥ, ಬಸವರಾಜ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-36-688216422

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.