ಅರಕಲಗೂಡು: ತಾಲ್ಲೂಕಿನ ಯಗಟಿ ದಾಖ್ಲೆ ಮಂಡಿಚಿಕ್ಕನ ಕೊಪ್ಪಲು ಗ್ರಾಮದ ರೈತ ಬೀರೇಗೌಡ (65) ನೇಣು ಬಿಗಿದು ಕೊಂಡು ಬುಧವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅವರು ತಮ್ಮ ಎರಡೂವರೆ ಎಕರೆ ಜಮೀನಿನಲ್ಲಿ ಬೆಳೆ ಬೆಳೆಯಲು ಯಗಟಿ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ₹ 70 ಸಾವಿರ, ಜೋಡಿಗುಬ್ಬಿ ಕಾವೇರಿ ಗ್ರಾಮೀಣ ಬ್ಯಾಂಕಿನಲ್ಲಿ ₹ 1.70 ಲಕ್ಷ ಹಾಗೂ ಕೈಸಾಲವನ್ನೂ ಮಾಡಿದ್ದರು. ಮನೆ ಕಟ್ಟುವ ಸಲುವಾಗಿ ಚೆನ್ನರಾಯ ಪಟ್ಟಣದ ಸೂರ್ಯೋದಯ ಪೈನಾನ್ಸ್ ಕಂಪನಿಯಿಂದ ₹ 5.20 ಲಕ್ಷ ಸಾಲ ಪಡೆದಿದ್ದರು. ಸಾಲದ ಕಂತು ಪಾವತಿಸದ ಕಾರಣಕ್ಕೆ ಫೈನಾನ್ಸ್ ಕಂಪನಿಯವರು ಮನೆಗೆ ಬೀಗ ಹಾಕಿದ್ದರು. ಇದರಿಂದ ನೊಂದು ಮನೆಯಲ್ಲೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕುಟುಂಬದವರು ಅರಕಲಗೂಡು ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-36-2093739639

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.