ಅರಕಲಗೂಡು: ಬಿಸಿಲಿನ ತಾಪ ಹೆಚ್ಚುತ್ತಿರುವ ಕಾರಣ ಎಲ್ಲರೂ ಆರೋಗ್ಯ ಕಾಪಾಡಿಕೊಳ್ಳಲು ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಬೇಕು ಎಂದು ತಹಶೀಲ್ದಾರ್ ಕೆ.ಸಿ. ಸೌಮ್ಯ ಸಲಹೆ ನೀಡಿದರು.

ಪಟ್ಟಣದ ಅನಕೃ ವೃತ್ತದಲ್ಲಿ ತಾಲ್ಲೂಕು ಆಡಳಿತ, ಪ.ಪಂ., ಆರೋಗ್ಯ ಇಲಾಖೆ ಸಹಯೋಗದಲ್ಲಿ ಹವಾಮಾನ ಬದಲಾವಣೆ ಮತ್ತು ಮಾನವ ಆರೋಗ್ಯ ರಾಷ್ಟ್ರೀಯ ಅರಿವು ಕಾರ್ಯಕ್ರಮದ ಅಂಗವಾಗಿ ಗುರುವಾರ ನಡೆದ ಆರೋಗ್ಯ ಅರಿವು ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಬಿಸಿಲಿನ ಬೇಗೆ ವಿಪರೀತವಾಗುತ್ತಿದೆ. ಜನರು ಆರೋಗ್ಯ ಕಾಪಾಡಿಕೊಳ್ಳಲು ಆರೋಗ್ಯ ಇಲಾಖೆ ಸೂಚಿಸಿರುವ ರಕ್ಷಣಾತ್ಮಕ ಕ್ರಮಗಳನ್ನು ಅನುಸರಿಸಬೇಕು ಎಂದು ಸಲಹೆ ನೀಡಿದರು.

ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಎಲ್ ಪುಷ್ಪಲತಾ ಮಾತನಾಡಿ, ಜನರು ಬಿಸಿಲಿನ ತಾಪದಿಂದ ಉಂಟಾಗುವ ದುಷ್ಪರಿಣಾಮಗಳಿಂದ ಪಾರಾಗಲು ದೇಹವನ್ನು ತಂಪಾಗಿಸುವ ತಂಪು ಪಾನಿಯಗಳನ್ನು ಸೇವಿಸಿ, ಮಧ್ಯಾಹ್ನದ ಬಿಸಿಲಿನ ವೇಳೆ ಸಾಧವಾದಷ್ಟು ಮನೆಯಲ್ಲಿ ಉಳಿಯಬೇಕು. ಕಾಟನ್ ಬಟ್ಟೆಗಳನ್ನು ಧರಿಸಬೇಕು. ಸಾಕಷ್ಟು ನೀರು ಕುಡಿಯುವುದು, ಹಣ್ಣು, ತರಕಾರಿ ಸೇವಿಸುವುದು ಸೇರಿ ಆರೋಗ್ಯ ಇಲಾಖೆ ಸೂಚಿಸಿರುವ ಮಾರ್ಗಸೂಚಿಗಳನ್ನು ಪಾಲಿಸಬೇಕು ಎಂದು ತಿಳಿಸಿದರು.

ಪ.ಪಂ. ಮುಖ್ಯಾಧಿಕಾರಿ ನಾಗೇಂದ್ರ ಕುಮಾರ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಮಂಜುಳಾ, ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಟಿ. ಕೆ. ಮಂಜುಳ, ಪರಮೇಶ್, ಲೀನಾ ಕುಮಾರಿ, ಕವಿತಾ, ಆಶಾ ಕಾರ್ಯಕರ್ತೆಯರು, ಆರೋಗ್ಯ ಇಲಾಖೆ ಸಿಬ್ಬಂದಿ ಇದ್ದರು.

ಪಟ್ಟಣದಲ್ಲಿ ಜಾಥಾ ನಡೆಸಿ ಕರಪತ್ರಗಳನ್ನು ವಿತರಿಸಿ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-36-1605711004

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.