ಅರಕಲಗೂಡು: ತಾಲ್ಲೂಕಿನ ಕಸಬಾ ಹೋಬಳಿಯ ಕೆಲ ಭಾಗದಲ್ಲಿ ಮಂಗಳವಾರ ಸಂಜೆ ಬಿರುಗಾಳಿ ಸಹಿತ ಅಬ್ಬರಿಸಿದ ಮಳೆಗೆ ಬಾಳೆ, ಅಡಿಕೆ ತೆಂಗಿನ ಬೆಳೆಗಳು ತೀವ್ರ ಹಾನಿಗೊಳಗಾಗಿದೆ.

ಬೈಚನಹಳ್ಳಿ, ಮುದ್ದನಹಳ್ಳಿ, ಮೂಡನಹಳ್ಳಿ, ಕೇಶವಾಪುರ, ಬಸವನಹಳ್ಳಿ ಸೇರಿದಂತೆ ಕಸಬಾ ಮತ್ತು ದೊಡ್ಡಮಗ್ಗೆ ಹೋಬಳಿ ಭಾಗದಲ್ಲಿ ಮಳೆ ಸುರಿದಿದೆ. ಹಲವೆಡೆ ಮರಗಳು ಧರೆಗುರುಳಿವೆ.

ಬಸವನಹಳ್ಳಿ ಗ್ರಾಮದ ನಿಂಗರಾಜು ಅವರು ಒಂದು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಬಾಳೆ ಬೆಳೆ ನೆಲಕಚ್ಚಿದೆ. ಬೆಳೆ ಹಾನಿ ಪ್ರದೇಶಕ್ಕೆ ತಹಶೀಲ್ದಾರ್ ಕೆ.ಸಿ.ಸೌಮ್ಯ, ಕಂದಾಯ ಮತ್ತು ತೋಟಗಾರಿಗೆ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಒಟ್ಟು 25 ಎಕರೆ ಪ್ರದೇಶದಲ್ಲಿ ತೋಟಗಾರಿಕಾ ಬೆಳೆ ಹಾನಿಗೊಳಗಾಗಿದೆ. ಬಾಳೆ 12 ಎಕರೆ, ಅಡಿಕೆ 9 ಎಕರೆ ಹಾಗೂ 3 ಎಕರೆ ಪ್ರದೇಶದ ತೆಂಗಿನ ಬೆಳೆ ಹಾನಿಗೊಳಗಾಗಿದ್ದು ಎನ್ಡಿಆರ್ಎಫ್ ಮಾರ್ಗಸೂಚಿಯಂತೆ ₹5.62 ಲಕ್ಷ ಬೆಳೆಹಾನಿಯಾಗಿದೆ ಎಂದು ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಡಿ.ರಾಜೇಶ್ ‘ಪ್ರಜಾವಾಣಿ’ಗೆ ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260430-36-1741718598

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.