ಅರಕಲಗೂಡು: ತಾಲ್ಲೂಕಿನಲ್ಲಿ ಸಮಗ್ರ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್ಐಆರ್) ಕಾರ್ಯ ಜೂನ್ 20 ರಿಂದ ಜುಲೈ 20 ರವರೆಗೆ ನಡೆಯುತ್ತಿದ್ದು, ಸಾರ್ವಜನಿಕರು ಸಹಕರಿಸುವಂತೆ ತಹಶೀಲ್ದಾರ್ ಕೆ.ಸಿ. ಸೌಮ್ಯ ಮನವಿ ಮಾಡಿದರು.

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದ, ಎಲ್ಲ ಜನರಿಗೂ ಅರಿವು ಮೂಡಿಸಲಾಗುತ್ತಿದೆ. ಮತದಾರರು ವೋಟರ್ ಹೆಲ್ಪ್ಲೈನ್ ಮತ್ತು ಇಸಿಐ ನೆಟ್ ಆ್ಯಪ್ಗಳನ್ನು ಮೊಬೈಲ್ನಲ್ಲಿ ಡೌನ್ಲೋಡ್ ಮಾಡಿಕೊಂಡು ತಮ್ಮ ಬೂತ್ ಮತ್ತು ವಿಧಾನಸಭಾ ಕ್ಷೇತ್ರದ ನಿಖರ ಮಾಹಿತಿಯನ್ನು ಪಡೆಯಬಹುದು. ಜನರು ನೋಂದಣಿಯನ್ನು ಖಾತ್ರಿಪಡಿಸಿಕೊಳ್ಳಬೇಕು ಎಂದರು.

ಬೂತ್ ಮಟ್ಟದ ಅಧಿಕಾರಿಗಳು ಮನೆಗೆ ಭೇಟಿ ನೀಡಲಿದ್ದು, ಅಗತ್ಯ ಮಾಹಿತಿ ಹಾಗೂ ದಾಖಲಾತಿಗಳನ್ನು ನೀಡಬೇಕು. ಅಧಿಕಾರಿಗಳು ನೀಡುವ ಫಾರ್ಮ್ನಲ್ಲಿ ಇತ್ತೀಚಿನ ಭಾವಚಿತ್ರವನ್ನು ಲಗತ್ತಿಸಿ, ನಿಖರ ವಿವರಗಳನ್ನು ಭರ್ತಿ ಮಾಡಿ ನೀಡಬೇಕು. ಮನೆಗೆ ಬೀಗ ಹಾಕಿದ್ದರೆ ಅಥವಾ ಬೇರೆ ಕಡೆಗೆ ಸ್ಥಳಾಂತರಗೊಂಡಿದ್ದರೆ, ಬಿಎಲ್ಒಗಳು ಕನಿಷ್ಠ ಮೂರು ಬಾರಿ ಭೇಟಿ ನೀಡಲಿದ್ದಾರೆ. ಲಭ್ಯವಾಗದಿದ್ದರೆ, ಚುನಾವಣಾ ಆಯೋಗದಿಂದ ನೋಟಿಸ್ ಜಾರಿ ಮಾಡಲಾಗುತ್ತದೆ. ಆ ಬಳಿಕ ಪಟ್ಟಿಯಲ್ಲಿ ಅವರ ಹೆಸರನ್ನು ಉಳಿಸಬೇಕೇ ಅಥವಾ ಕೈಬಿಡಬೇಕೇ ಎಂಬುದನ್ನು ನಿರ್ಧರಿಸಲಾಗುತ್ತದೆ ಎಂದರು.

ನಿಯಮಗಳ ಪ್ರಕಾರ, ಒಬ್ಬ ಮತದಾರನ ಹೆಸರು ಕೇವಲ ಒಂದು ಬೂತ್ನಲ್ಲಿ ಮಾತ್ರ ಇರಲು ಅವಕಾಶವಿರುತ್ತದೆ. ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲೂ ಮತದಾರರ ಸೌಲಭ್ಯ ಕೇಂದ್ರಗಳನ್ನು ತೆರೆಯಲಾಗಿದ್ದು, ನಿಗದಿತ ಸಮಯದಲ್ಲಿ ಜನರು ಭೇಟಿ ನೀಡಬಹುದಾಗಿದೆ. ಬಿಎಲ್ಒಗಳಿಗೆ ಈಗಾಗಲೇ ತರಬೇತಿ ನೀಡಲಾಗುತ್ತಿದೆ. ಪರಿಷ್ಕರಣೆ ಕಾರ್ಯದಲ್ಲಿ 283 ಬಿಎಲ್ ಒಗಳು 39 ಮಂದಿ ಸೂಪರ್ವೈಸರ್ಗಳು ಕಾರ್ಯ ನಿರ್ವಹಿಸಲಿದ್ದು ತಾಲ್ಲೂಕು ಪಂಚಾಯಿತಿ ಇಒ ನೊಡಲ್ ಅಧಿಕಾರಿಯಾಗಿರುತ್ತಾರೆ. ಪ್ರತಿ ರಾಜಕೀಯ ಪಕ್ಷದಿಂದ ಬೂತ್ ಮಟ್ಟದ ಏಜೆಂಟ್ಗಳನ್ನು ನೇಮಕ ಮಾಡಲು ಸೂಚಿಸಲಾಗಿದೆ. ಮಾಹಿತಿಯಲ್ಲಿನ ಲೋಪದೋಷಗಳನ್ನು ಸರಿಪಡಿಸಲು ಹಾಗೂ ಪರಿಷ್ಕರಣ ಕಾರ್ಯದಲ್ಲಿ ಸಹಕರಿಸಲು ಅವರಿಗೂ ತರಬೇತಿಯನ್ನು ನೀಡಲಾಗುವುದು ಎಂದರು. ಮತದಾನ ನೋಂದಣಾಧಿಕಾರಿ ರುದ್ರಮುನಿ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-36-281328253

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.