ಅರಕಲಗೂಡು: ರೈತರ ಕುಂದುಕೊರತೆ ಸಭೆಯನ್ನು ಕೂಡಲೆ ಕರೆದು ರೈತರ ಸಮಸ್ಯೆಗಳಿಗೆ ಪರಿಹಾರ ದೊರಕಿಸಬೇಕು ಎಂದು ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲ್ಲೂಕು ಘಟಕದ ಸದಸ್ಯರು ಅಧ್ಯಕ್ಷ ಎಚ್. ಎಚ್. ಭುವನೇಶ್ ನೇತೃತ್ವದಲ್ಲಿ ಬುಧವಾರ ತಾಲ್ಲೂಕು ಆಡಳಿತಕ್ಕೆ ಮನವಿ ಸಲ್ಲಿಸಿದರು.

ತಾಲ್ಲೂಕು ಮಟ್ಟದಲ್ಲಿ ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿದ್ದು ಈವರಗೆ ಮೂರು ಸಭೆಗಳನ್ನು ನಡೆಸಲಾಗಿದೆ. ಕಳೆದ ಎರಡು ತಿಂಗಳಿನಿಂದ ಸಭೆ ನಡೆದಿಲ್ಲ, ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳು ಪ್ರಾರಂಭವಾಗುತ್ತಿದ್ದು ರಸಗೊಬ್ಬರ, ಬಿತ್ತನೆ ಬೀಜ ವಿತರಣೆ ಸೇರಿದಂತೆ ಕಲವು ವಿಷಯಗಳ ಕುರಿತು ಚರ್ಚಿಸಿ ಕ್ರಮ ಕೈಗೊಳ್ಳಬೇಕಿದೆ. ಈ ಕುರಿತು ತಹಶೀಲ್ದಾರ್ ಅವರನ್ನು ಪ್ರಶ್ನಿಸಿದರೆ ಸರಿಯಾಗಿ ಸ್ಪಂದನೆ ನೀಡುತ್ತಿಲ್ಲ. ಕೂಡಲೆ ಸಭೆ ಕರೆದು ಸಮಸ್ಯೆಗಳಿಗೆ ಪರಿಹಾರ ದೊರಕದಿದ್ದರೆ ಪ್ರತಿಭಟನೆಗೆ ಮುಂದಾಗಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-36-1934080202

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.