ಅರಕಲಗೂಡು: ರೈತರು ಕೃಷಿಯಲ್ಲಿ ತಂತ್ರಜ್ಞಾನ ಹಾಗೂ ಪ್ರಯೋಗಶೀಲತೆಗೆಒತ್ತು ನೀಡಬೇಕು ಎಂದು ಪ್ರಗತಿಪರ ಕೃಷಿಕ ಎಂ.ಸಿ. ರಂಗಸ್ವಾಮಿ ಸಲಹೆ ನೀಡಿದರು.

ತಾಲ್ಲೂಕಿನ ಮಲ್ಲಿಪಟ್ಟಣದಲ್ಲಿ ಈಚೆಗೆ ನಡೆದ ಕಾಫಿ ಬೆಳೆಗಾರರ ಸಂಘದ ವಾರ್ಷಿಕ ಮಹಾ ಸಭೆಯಲ್ಲಿ ಮಾತನಾಡಿದರು.

ಕೃಷಿಯಲ್ಲಿ ಒಂದೇ ಬೆಳೆಗೆ ಸೀಮಿತಗೊಳ್ಳದೆ ವೈಜ್ಞಾನಿಕ ಪದ್ಧತಿ ಅಳವಡಿಸಿಕೊಂಡು ಮಿಶ್ರ ಬೆಳೆಗಳನ್ನು ಬೆಳೆಯಬೇಕು. ಕಾಫಿ ತೋಟದಲ್ಲಿ ಅಂತರ ಬೆಳೆಯಾಗಿ ಏಲಕ್ಕಿ, ಕಾಳುಮೆಣಸು, ಕಿತ್ತಳೆ ಮುಂತಾದ ಬೆಳೆಗಳನ್ನು ಬೆಳೆಯುವತ್ತ ಗಮನ ಹರಿಸಬೇಕು. ವಿದ್ಯಾವಂತ ಯುವಕರು ಶಿಕ್ಷಣ ಪಡೆದು ಸರ್ಕಾರಿ ನೌಕರಿಗಾಗಿ ಕಾಯದೆ ಕೃಷಿಯಲ್ಲಿ ಪ್ರಯೋಗ ಮಾಡಬೇಕು. ಸಮಗ್ರ ಕೃಷಿ, ಹೈನುಗಾರಿಕೆಯನ್ನು ಅಳವಡಿಸಿಕೊಂಡರೆ ಆರ್ಥಿಕವಾಗಿ ಹೆಚ್ಚಿನ ಲಾಭ ಗಳಿಸಲು ಸಾಧ್ಯ ಎಂದು ಹೇಳಿದರು.

ಸರ್ಕಾರ ರೈತರಿಗೆ ಹೆಚ್ಚಿನ ಸೌಲಭ್ಯ ಒದಗಿಸಬೇಕು. ಉತ್ತಮ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಲು ಗಮನ ಹರಿಸಬೇಕು ಎಂದರು.

ಹಾಸನ ಕಾಫಿ ಮಂಡಳಿ ಉಪ ನಿರ್ದೇಶಕ ಶಕ್ತಿ, ‘ರೈತರು ಮಣ್ಣು ಪರೀಕ್ಷೆ ಮಾಡಿಸಬೇಕು. ಅಗತ್ಯವಾದ ಪೋಷಕಾಂಶಗಳನ್ನು ನೀಡಿ ಮಣ್ಣಿನ ಆರೋಗ್ಯ ಕಾಪಾಡಿಕೊಂಡರೆ ಉತ್ತಮ ಬೆಳೆ ಬೆಳೆಯಲು ಸಾಧ್ಯ. ಕಾಫಿ ಮಂಡಳಿ ಬೆಳೆಗಾರರಿಗೆ ಅಗತ್ಯ ಸವಲತ್ತುಗಳನ್ನು ಒದಗಿಸಲು ಕ್ರಮ ವಹಿಸಿದೆ’ ಎಂದರು.

ಅಧ್ಯಕ್ಷತೆ ವಹಿಸಿದ್ದ ತಾಲ್ಲೂಕು ಕಾಫಿ ಬೆಳೆಗಾರರ ಸಂಘದ ಅಧ್ಯಕ್ಷ ಮಾಗಲು ಬಸವರಾಜ್, ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಡಿ. ರಾಜೇಶ್ ಮಾತನಾಡಿದರು.

ಸಂಘದ ಕಾರ್ಯದರ್ಶಿ ವಿಜಯಕುಮಾರ್ ವರದಿ ಮಂಡಿಸಿದರು.

ರಂಗಸ್ವಾಮಿ ಅವರನ್ನು ಗೌರವಿಸಲಾಯಿತು.

ಮಾಜಿ ಶಾಸಕ ಎ. ಟಿ. ರಾಮಸ್ವಾಮಿ, ಕಾಫಿ ಬೆಳೆಗಾರರ ಸಂಘದ ತಾಲ್ಲೂಕು ಘಟಕದ ಉಪಾಧ್ಯಕ್ಷ ಎ.ಸಿ. ದೇವರಾಜೇಗೌಡ, ಸಂಘದ ನಿರ್ದೇಶಕ ವೆಂಕಟೇಶ್, ಬೆಳೆಗಾರರಾದ ಕೃಷ್ಣರಾಜ್, ಬಸವರಾಜು, ಕಾಂತರಾಜ್, ಎಂ.ಎಂ. ವಿಶ್ವನಾಥ್, ವಿಜಯ್, ಅರುಣ್ ಕುಮಾರ್, ಸುಮಿತ್ರಮ್ಮ, ಶಿವಣ್ಣ, ಲೋಹಿತ್ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260323-36-1473096911

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.