ಅರಕಲಗೂಡು: ತಾಲ್ಲೂಕಿನಲ್ಲಿ ಹೆಣ್ಣುಮಕ್ಕಳಿಗೆ ಗರ್ಭಕಂಠ ಕ್ಯಾನ್ಸರ್ ತಡೆಗೆ ಎಚ್ಪಿವಿ ಲಸಿಕೆ ಹಾಕುವ ಕಾರ್ಯ ಶೇ 70 ಗುರಿ ಸಾಧನೆಯಾಗಿದೆ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಪುಷ್ಪಲತಾ ತಿಳಿಸಿದರು.

ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ತಾಲ್ಲೂಕು ಮಟ್ಟದ ಅಂತರಇಲಾಖೆ ಅಧಿಕಾರಿಗಳ ಸಮಗ್ರ ರೋಗಗಳ ಕಣ್ಗಾವಲು ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.

ಶೈಕ್ಷಣಿಕ ರಜೆ ಕಾರಣ ಲಸಿಕೆ ಹಾಕುವ ಕಾರ್ಯ ಶೇ 30 ಬಾಕಿ ಇದ್ದು ಈ ಶೈಕ್ಷಣಿಕ ವರ್ಷದಲ್ಲಿ ಪೂರ್ಣ ಗೊಳಿಸಲಾಗುವುದು. ಹೆಣ್ಣು ಮಕ್ಕಳಿಗೆ ಗರ್ಭಕಂಠದ ಕ್ಯಾನ್ಸರ್ ಬರದಂತೆ ಈ ಲಸಿಕೆಯನ್ನು ನೀಡಲಾಗುತ್ತಿದೆ. 14 ವರ್ಷ ತುಂಬಿದ 15 ವರ್ಷ ವಯೋಮಿತಿಯ ಹೆಣ್ಣುಮಕ್ಕಳಿಗೆ ಲಸಿಕೆ ನೀಡುತ್ತಿದ್ದು, ಯಾವುದೇ ಅಪಪ್ರಚಾರಕ್ಕೆ ಕಿವಿಗೊಡದಂತೆ ಪ್ರತಿ ಹೆಣ್ಣುಮಗುವೂ ಈ ಲಸಿಕೆಯನ್ನು ಪಡೆದುಕೊಳ್ಳುವುದು ಅಗತ್ಯ, ಶಿಕ್ಷಣ ಇಲಾಖೆ ಮತ್ತು ಪೋಷಕರು ಸಹಕಾರ ನೀಡಬೇಕು ಎಂದರು.

ಜೂನ್ 28 ರಂದು ಪಲ್ಸ್ ಪೊಲಿಯೊ ಲಸಿಕೆ ಅಭಿಯಾನ ನಡೆಯಲಿದ್ದು, ತಾಲ್ಲೂಕಿನಲ್ಲಿ 5 ವರ್ಷ ವಯೋಮಿತಿಯ 10,771 ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಿದ್ದು 102 ಬೂತ್ಗಳನ್ನು ತೆರೆಯಲಾಗುವುದು. ಅತಿಸಾರ ನಿಯಂತ್ರಣ ಪಾಕ್ಷಿಕದಲ್ಲಿ 6 ವರ್ಷ ವಯೋಮಿತಿಯ ಮಕ್ಕಳಿರುವ ಮನೆಗಳಿಗೆ ಆರೋಗ್ಯ ಕಾರ್ಯಕರ್ತರು ಭೇಟಿ ನೀಡಿ ಒಆರ್ಎಸ್ ಪ್ಯಾಕೆಟ್ಗಳನ್ನು ವಿತರಿಸುವರು. ಮಲೇರಿಯಾ ತಡೆ ಮಾಸಾಚರಣೆ ಪ್ರಯುಕ್ತ ಸೊಳ್ಳೆಗಳ ನಿಯಂತ್ರಣ ಮತ್ತು ಮುನ್ನೆಚ್ಚರಿಕೆ ಕ್ರಮಗಳ ಕುರಿತು ಜನರಲ್ಲಿ ಅರಿವು ಮೂಡಿಸಲಾಗುವುದು. ಬಾಲ ಸ್ವಾಸ್ಥ್ಯ ಯೋಜನೆ ಕಾರ್ಯಕ್ರಮದಲ್ಲಿ ವೈದ್ಯರು ಶಾಲೆಗಳಿಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ತಪಾಸಣೆ ನಡೆಸಿ ಚಿಕಿತ್ಸೆ ಮತ್ತು ಸಲಹೆ ನೀಡುವರು. ಇವುಗಳ ಅನುಷ್ಠಾನಕ್ಕೆ ಎಲ್ಲ ಇಲಾಖೆಗಳು ಕೈ ಜೋಡಿಸುವಂತೆ ಕೋರಿದರು.

ತಹಶೀಲ್ದಾರ್ ಕೆ.ಸಿ. ಸೌಮ್ಯ ಅಧ್ಯಕ್ಷತೆ ವಹಿಸಿದ್ದರು. ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಮಂಜುಳ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಕೆ.ಟಿ. ಪರಮೇಶ್, ಆಶಾಮೆಂಟರ್ ಕವಿತ, ಆರೋಗ್ಯ ನಿರೀಕ್ಷಕರಾದ ಮೋಹನ್, ಜಯರಾಮ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-36-1362189287

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.