ಅರಕಲಗೂಡು: ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ವೈದ್ಯಕೀಯ ವೆಚ್ಚದ ಬಿಲ್ಗಳಿಗೆ ಮೇಲು ಸಹಿ ಮಾಡಿ ವೈದ್ಯಕೀಯ ವೆಚ್ಚದ ಹಣವನ್ನು ಮಂಜೂರು ಮಾಡಿಕೊಡುವಂತೆ ಕೋರಿ ಶಿಕ್ಷಕರ ಸಂಘ ಹಾಗೂ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಮತ್ತು ಸದಸ್ಯರು, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗೆ ಗುರುವಾರ ಮನವಿ ಸಲ್ಲಿಸಿದರು.

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಮಲ್ಲಿಕಾರ್ಜುನಯ್ಯ ಮಾತನಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ವೈದ್ಯಕೀಯ ವೆಚ್ಚದ ಬಿಲ್ಗಳಿಗೆ 2022- 23 ನೇ ಸಾಲಿನಿಂದ ಈವರೆಗೂ ಹಣ ಬಿಡುಗಡೆಯಾಗಿಲ್ಲ. ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದ ಶಿಕ್ಷಕರು ಲಕ್ಷಾಂತರ ರೂಪಾಯಿ ಸಾಲಮಾಡಿ ಚಿಕಿತ್ಸೆ ಪಡೆದಿದ್ದು, ಸಾಲ ತೀರಿಸಲಾಗದೇ ತೊಂದರೆ ಅನುಭವಿಸುತ್ತಿದ್ದಾರೆ. ಪ್ರಸ್ತುತ ಸಾಲಿನಲ್ಲಿ ₹1.98 ಕೋಟಿ ಬಿಡುಗಡೆಯಾಗಿದ್ದು, ಮೇಲು ಸಹಿ ಮಾಡಿ ಬಿಲ್ಗಳನ್ನು ಪಾಸ್ ಮಾಡುವ ಮೂಲಕ ಶಿಕ್ಷಕರ ಸಂಕಷ್ಟಕ್ಕೆ ಸ್ಫಂದಿಸುವಂತೆ ಮನವಿ ಮಾಡಿದರು.

ಸಮಸ್ಯೆ ಕುರಿತು ಸುದ್ದಿಗಾರರಿಗೆ ಪ್ರತಿಕ್ರಿಯಿಸಿ ಇಒ ಶ್ರೀನಿವಾಸ್, ವೈದ್ಯಕೀಯ ವೆಚ್ಚದ ಬಿಲ್ಗಳು ಬಂದಿದ್ದು, ಅವುಗಳ ಪರಿಶೀಲನೆ ನಡೆಸಿದಾಗ ಕ್ರಮಬದ್ದವಾಗಿಲ್ಲ. ಸಹಿಗಳಲ್ಲಿ ವ್ಯತ್ಯಾಸವಿದೆ. ಕೆಲವು ಬಿಲ್ಗಳಲ್ಲಿ ಬಿಇಒ ಸಹಿ ಇಲ್ಲ. ದೋಷಪೂರಿತವಾಗಿದ್ದು, ಕ್ರಮಬದ್ದವಾಗಿ ಬಿಲ್ಗಳನ್ನು ಸಲ್ಲಿಸಿದರೆ ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ಹೇಳಿದರು.

ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಪುಟ್ಟರಾಜ್, ಶಿಕ್ಷಕರ ಸಂಘದ ರಾಜ್ಯ ಪರಿಷತ್ ಸದಸ್ಯ ಕೆ.ಟಿ. ಮೋಹನ್ ಕುಮಾರ್, ಶಿಕ್ಷಕರ ಸಂಘದ ಪದಾಧಿಕಾರಿಗಳು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260327-36-1131183299

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.