ಅರಸೀಕೆರೆ: ನಗರದ ಬಸ್ ನಿಲ್ದಾಣದ ಮುಂಭಾಗ ನೂತನ ಕಂಚಿನ ಅಶ್ವಾರೂಢ ಬಸವೇಶ್ವರ ಪುತ್ಥಳಿ ಅನಾವರಣ ಕಾರ್ಯಕ್ರಮ ಸೋಮವಾರ ನಡೆಯಲಿದ್ದು, ಬಸವ ಜಯಂತಿಯನ್ನು ವಿಶೇಷವಾಗಿ ಆಚರಿಸಲಾಗುತ್ತಿದೆ.

ಗೊಂದಲಗಳ ನಡುವೆಯೂ ನಗರದಲ್ಲಿ ಬಸವೇಶ್ವರರ ಪುತ್ಥಳಿ ಲೋಕಾರ್ಪಣೆಗೊಳ್ಳಲು ಸಕಲ ಸಿದ್ಧತೆಗಳು ಶುರುವಾಗಿದ್ದು, ಬಸವಾಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ. ಬಸವಣ್ಣ ಯಾವುದೇ ಧರ್ಮಕ್ಕೇ ಸೀಮಿತವಲ್ಲ. ಅವರೊಬ್ಬರೂ ವಿಶ್ವಗುರು ಆಗಿರು ವುದರಿಂದ ಜನ ಸಂತಸದಲ್ಲಿದ್ದಾರೆ.

ಕ್ಷೇತ್ರದ ಆರಾಧ್ಯ ದೈವ ಗುರು ಜೇನುಕಲ್ಲು ಸಿದ್ದೇಶ್ವರ ಸ್ವಾಮಿಯ ಪೂಜೆಯೊಂದಿಗೆ ಬೆಳಿಗ್ಗೆ 10.30ಕ್ಕೆ ಲೋಕಾರ್ಪಣೆ ಕಾರ್ಯಕ್ರಮ ಆರಂಭವಾಗಲಿದ್ದು, ಸಾಂಸ್ಕೃತಿಕ ನಾಯಕ ಬಸವಣ್ಣ ಅವರ ಪ್ರತಿಮೆಯನ್ನು ಬಸವಾಭಿಮಾನಿಗಳು ಕಣ್ತುಂಬಿಕೊಳ್ಳಲಿದ್ದಾರೆ.

ಕೆರೆಗೋಡಿ ರಂಗಾಪುರ ಗುರುಪರದೇಶಿಕೇಂದ್ರ ಸ್ವಾಮೀಜಿ, ಹಾರನಹಳ್ಳಿ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ, ಯಳನಾಡು ಜ್ಞಾನಪ್ರಭು ಸಿದ್ದರಾಮದೇಶಿಕೇಂದ್ರ ಸ್ವಾಮೀಜಿ, ಮಾಡಾಳು ನಿರಂಜನ ಪೀಠದ ರುದ್ರಮುನಿ ಸ್ವಾಮೀಜಿ, ದೊಡ್ಡಮೇಟಿ ಕುರ್ಕೆ ಸಿದ್ದಬಸವ ಸ್ವಾಮೀಜಿ ಸಾನಿಧ್ಯ ವಹಿಸಲಿದ್ದು, ರಾಜ್ಯ ಗೃಹ ಮಂಡಳಿ ಅಧ್ಯಕ್ಷ, ಶಾಸಕ ಕೆ.ಎಂ.ಶಿವಲಿಂಗೇಗೌಡ ಪುತ್ಥಳಿ ಅನಾವರಣ ಮಾಡಲಿದ್ದಾರೆ.

ಸಂಜೆ 5 ಗಂಟೆಗೆ ಜಗಜ್ಯೋತಿ ಬಸವೇಶ್ವರ ಅದ್ದೂರಿ ಜಯಂತ್ಯುತ್ಸವ ಹಮ್ಮಿಕೊಳ್ಳಲಾಗಿದ್ದು, ಬಸವೇಶ್ವರ ಭಾವಚಿತ್ರವಿರುವ ಬಾವುಟಗಳು, ಕೇಸರಿ ಬಂಟಿಂಗ್ಸ್ಗಳು, ವಿದ್ಯುತ್ ದೀಪಾಲಂಕಾರದಿಂದಾಗಿ ನಗರವು ಮದುವಣಗಿತ್ತಿಯಂತೆ ಶೃಂಗಾರಗೊಂಡಿದೆ.

ಬಸವಣ್ಣ ದೇವಸ್ಥಾನದಿಂದ ಆರಂಭವಾಗುವ ಬಸವಣ್ಣನವರ ಭಾವಚಿತ್ರದ ಅದ್ದೂರಿ ಉತ್ಸವವು ಶ್ಯಾನುಭೋಗರ ಬೀದಿ, ಪೇಟೆಬೀದಿ, ಬಿ.ಎಚ್.ರಸ್ತೆ, ಪಿ.ಪಿ.ವೃತ ಸೇರಿದಂತೆ ಪ್ರಮುಖ ಬೀದಿಗಳಲ್ಲಿ ಸಂಚರಿಸಲಿದೆ.

ಮೆರವಣಿಗೆಯಲ್ಲಿ ಧ್ವಜಕುಣಿತ, ಡೊಳ್ಳುಕುಣಿತ ಸೇರಿದಂತೆ ಹತ್ತಾರು ಕಲಾತಂಡಗಳು ಉತ್ಸವದ ಮೆರುಗು ಹೆಚ್ಚಿಸಲಿದೆ. ಪ್ರಮುಖ ಬೀದಿಗಳಲ್ಲಿ ಮದ್ದುಗುಂಡುಗಳ ಪ್ರದರ್ಶನ ನಡೆಯಲಿದೆ. ನಂತರ ಪ್ರಸಾದದ ವ್ಯವಸ್ಥೆ ಮಾಡಲಾಗಿದೆ ಎಂದು ಬಸವ ಜಯಂತಿ ಆಚರಣಾ ಸಮಿತಿ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260420-36-407881619

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.