ಅರಸೀಕೆರೆ: ‘ರುಕ್ಮಿಣಿ ಪಾಂಡುರಂಗನಲ್ಲಿ ಆಚಲ ಭಕ್ತಿ, ಕೈಕಸಿಬಿನ ಮೇಲೆ ನಂಬಿಕೆ, ಸ್ವಾಭಿಮಾನದ ಬದುಕು ಇದು ಭಾವಸಾರ ಕ್ಷತ್ರಿಯ ಸಮಾಜದ ವೈಶಿಷ್ಟ’ ಎಂದು ಒಕ್ಕಲಿಗರ ಸಮಾಜದ ತಾಲ್ಲೂಕು ಘಟಕದ ಅಧ್ಯಕ್ಷ ಆರ್.ಅನಂತಕುಮಾರ್ ಹೇಳಿದರು.

ನಗರದ ರುಕ್ಮಿಣಿ ಪಾಂಡುರಂಗ ದೇವಾಲಯದಲ್ಲಿ ಭಾವಸಾರ ಕ್ಷತ್ರಿಯ ಸಮಾಜದ ವತಿಯಿಂದ ಆಯೋಜಿಸಿದ್ದ 89ನೇ ದಿಂಡಿ ಮಹೋತ್ಸವದ ಧಾರ್ಮಿಕ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ‘ವಸ್ತ್ರ ವಿನ್ಯಾಸದಲ್ಲಿ ಸಿದ್ಧದಹಸ್ತರಾಗಿರುವ ಭಾವಸಾರ ಕ್ಷತ್ರಿಯ ಸಮಾಜದ ಬಹುತೇಕ ಮಂದಿ ಟೈಲರಿಂಗ್ ವೃತ್ತಿಯಲ್ಲಿ ಬದುಕು ಕಟ್ಟಿಕೊಂಡು ಬಂದಿದೆ’ ಎಂದರು.

‘ಟೈಲರಿಂಗ್ ವೃತ್ತಿ ಒಂದು ಶ್ರೇಷ್ಠ ವೃತ್ತಿಯಾಗಿದೆ. ಆದರೂ ಸಹ ಪ್ರಸ್ತುತ ಸಮಾಜ ಆಧುನಿಕತೆಯ ನಾಗಾಲೋಟದಲ್ಲಿ ಸಾಗುತ್ತಿದ್ದು ಭಾವಸಾರ ಕ್ಷತ್ರಿಯ ಸಮಾಜದ ಬಾಂಧವರು ತಮ್ಮ ಮಕ್ಕಳಿಗೆ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಒತ್ತು ನೀಡುವ ಮೂಲಕ ಇತರ ಕ್ಷೇತ್ರಗಳಲ್ಲಿ ಸಾಧನೆ ಮಾಡಲು ಪ್ರೇರಣೆ ನೀಡಿ’ ಎಂದು ಸಲಹೆ ನೀಡಿದರು.

ಬಂಕಾಪುರದ ರುಕ್ಮಿಣಿ ಪಾಂಡುರಂಗ ದೇವಾಲಯದ ಗುರುಗಳಾದ ಭಾನುದಾಸ್ ಸರ್ವದೆ ಮಾತನಾಡಿ, ‘ಇಲ್ಲಿನ ಭಾವಸಾರ ಕ್ಷತ್ರಿಯ ಸಮಾಜ ನಿರಂತರವಾಗಿ 89 ವರ್ಷಗಳ ಕಾಲ ದಿಂಡಿ ಮಹೋತ್ಸವವನ್ನು ಆಚರಿಸುತ್ತಾ ಬಂದಿರುವುದು ಮಾದರಿ’ ಎಂದರು.

ಸಮಾರಂಭದಲ್ಲಿ ಭಾವಸಾರ ಕ್ಷತ್ರಿಯ ಸಮಾಜದ ಗೌರವ ಅಧ್ಯಕ್ಷ ಕೃಷ್ಣಮೂರ್ತಿ, ಅಧ್ಯಕ್ಷ ನರೇಶ್, ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಟಿ. ಆನಂದ್, ಮಾಜಿ ಅಧ್ಯಕ್ಷ ರಾಮಚಂದ್ರ, ಉಪಾಧ್ಯಕ್ಷ ಹೇಮಂತ್ ಕುಮಾರ್, ಪ್ರಧಾನ ಕಾರ್ಯದರ್ಶಿ ಎಸ್.ವಿ. ನವೀನ್ ಕುಮಾರ್ ಉಪಸ್ಥಿತರಿದ್ದರು.

ಸಂಜೆ ರುಕ್ಮಿಣಿ ಸಮೇತ ಪಾಂಡುರಂಗ ಸ್ವಾಮಿಯ ಉತ್ಸವ ಮೂರ್ತಿಯನ್ನು ಮೆರವಣಿಗೆ ಮಾಡಲಾಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-36-1830729441

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.