ಅರಸೀಕೆರೆ: ‘ನಗರದ ಸ್ವಚ್ಛತೆ ಕಾಪಾಡುವುದು ಪೌರಕಾರ್ಮಿಕರ ಕರ್ತವ್ಯ ಮಾತ್ರವಲ್ಲ, ನಮ್ಮೆಲ್ಲರ ಜವಾಬ್ದಾರಿ ಕೂಡ’ ಎಂದು ರಾಜ್ಯ ಗೃಹ ಮಂಡಳಿಯ ಅಧ್ಯಕ್ಷ, ಶಾಸಕ ಕೆ.ಎಂ.ಶಿವಲಿಂಗೇಗೌಡ ಹೇಳಿದರು.

ಸ್ವಚ್ಛ ಭಾರತ್ ಮಿಷನ್ 2.0 ಯೋಜನೆ ಅಡಿ ನಗರಸಭೆ ವತಿಯಿಂದ ಪ್ಲಾಸ್ಟಿಕ್ ಬಳಕೆ ನಿಷೇಧ, ಹಸಿ ಮತ್ತು ಒಣ ಕಸ ವಿಂಗಡಣೆ, ನಗರದ ಸ್ವಚ್ಛತೆ ಕಾಪಾಡುವಲ್ಲಿ ಜನತೆಯ ಸಹಕಾರ ಕುರಿತು ಆಯೋಜಿಸಿದ್ದ ಸ್ವಚ್ಛತಾ ರ್ಯಾಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ನಗರದ ಸ್ವಚ್ಛತೆಯನ್ನು ಕಾಪಾಡಲು ಪೌರ ಕಾರ್ಮಿಕರು ಹಗಲು ಇರುಳು ಶ್ರಮಿಸುತ್ತಿದ್ದು, ಅವರ ಸೇವೆಗೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಆದರೆ ಸಾರ್ವಜನಿಕರು ತಮ್ಮ ಜವಾಬ್ದಾರಿ ಅರಿಯದೇ ಸಾರ್ವಜನಿಕ ಸ್ಥಳಗಳಲ್ಲಿ ಅಸ್ಪಚ್ಛತೆ ಕಾರಣವಾಗುತ್ತಿರುವುದು ನಾಗರಿಕ ಸಮಾಜದ ನಡವಳಿಕೆ ಅಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ನಗರ ವ್ಯಾಪ್ತಿಯಲ್ಲಿ ಖಾಸಗಿಯವರು ಹೊಂದಿರುವ ನಿವೇಶನಗಳು ಹಾಗೂ ನೂತನವಾಗಿ ಅಭಿವೃದ್ಧಿ ಪಡಿಸಿರುವ ಲೇಔಟ್ಲ್ಲಿ ಗಿಡ ಗಂಟೆಗಳು ಬೆಳೆದು, ಕಾಡು ಪ್ರಾಣಿಗಳಿಗೆ ಆಶ್ರಯ ತಾಣ ಆಗುತ್ತಿವೆ. ಈ ಬಗ್ಗೆ ನಗರಸಭೆ ಅಧಿಕಾರಿ ಗಳು ನಿವೇಶನ ಮಾಲೀಕರಿಗೆ ಸೂಚನೆ ನೀಡುವಂತೆ ಸೂಚಿಸಿದರು.

ನಗರದ ಮೂಲಕ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ 206 ಟಿ.ಎಚ್.ರಸ್ತೆಯ ಎರಡು ಬದಿ ಅನಧಿಕೃತವಾಗಿ ಇಟ್ಟಿರುವ ಅಂಗಡಿಗಳಿಂದ ಫುಟ್ಪಾತ್ ಮೇಲೆ ಸಂಚರಿಸುವ ಪಾದಚಾರಿಗಳಿಗೆ ತೊಂದರೆ ಆಗುತ್ತಿದೆ ಎಂದು ನಿತ್ಯ ದೂರು ಕೇಳಿ ಬರುತ್ತಿವೆ. ನಗರದ ಸೌಂದರ್ಯದ ದೃಷ್ಟಿಯಿಂದಲೂ ಈ ಬೆಳವಣಿಗೆ ಸರಿ ಕಾಣುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ ಅವರು, ಫುಟ್ಪಾತ್ ವ್ಯಾಪಾರಿಗಳಿಗೆ ಜೀವನದ ಭದ್ರತೆ ಒದಗಿಸುವುದು ನಮ್ಮೆಲ್ಲರ ಕರ್ತವ್ಯ. ಹಾಗಾಗಿ ಶೀಘ್ರದಲ್ಲೇ ಪುಟ್ಪಾತ್ ವ್ಯಾಪಾರಿಗಳಿಗೆ ಸೂಕ್ತ ಮಳಿಗೆಗಳನ್ನು ನಿರ್ಮಿಸಿ ಕೊಡಲಾಗುವುದು. ಅಲ್ಲಿಯವರೆಗೂ ಫುಟ್ಪಾತ್ ಮೇಲೆ ಅನಧಿಕೃತವಾಗಿ ಅಂಗಡಿ ಇಟ್ಟುಕೊಳ್ಳುತ್ತಿರುವ ಬಗ್ಗೆ ನಗರಸಭೆ ಅಧಿಕಾರಿಗಳು ಗಮನಹರಿಸಿ ಕ್ರಮ ಕೈಗೊಳ್ಳುವಂತೆ ತಾಕೀತು ಮಾಡಿದರು.

ನಗರಸಭೆಯ ಪೌರಾಯುಕ್ತ ಕೃಷ್ಣಮೂರ್ತಿ ಮಾತನಾಡಿದರು. ನಗರಸಭೆಯ ಪರಿಸರ ಎಂಜಿನಿಯರ್ ರವಿಕುಮಾರ್, ಆರೋಗ್ಯ ನಿರೀಕ್ಷಕ ರೇವಣ್ಣ ಮಂಜುನಾಥ್ ಉಪಸ್ಥಿತರಿದ್ದರು.

ಬಳಿಕ ಪೌರಕಾರ್ಮಿಕರ ಜೊತೆಗೂಡಿ ನಗರಸಭೆಯ ಸಿಬ್ಬಂದಿ ನಗರದಲ್ಲಿ ಜಾಥಾ ನಡೆಸುವ ಮೂಲಕ ಪ್ಲಾಸ್ಟಿಕ್ ಬಳಕೆ ನಿಷೇಧ ಹಾಗೂ ನಗರದ ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಸಾರ್ವಜನಿಕರ ಪಾತ್ರ ಕುರಿತು ಅರಿವು ಮೂಡಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-36-495444437

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.